ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen) ಹತ್ಯೆಯನ್ನು ಖಂಡಿಸಿ ಮೂರು ತಾಲೂಕುಗಳ ಬಂದ್ ಗೆ ಕರೆ ನೀಡಲಾಗಿದೆ
ಪುತ್ತೂರು : ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಬರ್ಬರವಾಗಿ ಭೀಕರವಾಗಿ ಕೊಲ್ಲಲ್ಪಟ್ಟ ಪ್ರವೀಣ್ ನೆಟ್ಟಾರು ಹತ್ಯೆಗೆ ಇಡೀ ಕರ್ನಾಟಕವೇ ಬೆಚ್ಚಿ ಬಿದ್ದಿದೆ. ಕೇರಳದಿಂದ ಬಂದ ದುಷ್ಕರ್ಮಿಗಳು ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ನಡುವೆ ಘಟನೆಯನ್ನು ಖಂಡಿಸಿ ಪುತ್ತೂರು, ಕಡಬ, ಸುಳ್ಯ ತಾಲೂಕು ಬಂದ್ ಕರೆ ನೀಡಲಾಗಿದೆ. ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂಜಾನೆಯೇ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ. ಇನ್ನು ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ಮುಂಜಾಗ್ರತ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಡಬ, ಸುಳ್ಯ ಪುತ್ತೂರು ಮಾತ್ರವಲ್ಲದೆ ವಿಟ್ಲ ಪ್ರದೇಶದಲ್ಲೂ ಬಂದ್ ಗೆ ಸ್ಪಂದನೆ ಸಿಕ್ಕಿದ್ದು, ಅಂಗಡಿಗಳನ್ನು ಮುಚ್ಚಿ ಪ್ರವೀಣ್ ಕೊಲೆಯನ್ನು ಖಂಡಿಸಲಾಗಿದೆ.
ಇದನ್ನೂ ಓದಿ : Balipa narayana bhagavatha : ಆಸ್ಪತ್ರೆಗೆ ದಾಖಲಾದ ಬಲಿಪ ನಾರಾಯಣ ಭಾಗವತ : ಆರೋಗ್ಯ ವಿಚಾರಿಸಿದ ಪಟ್ಲ
ಈ ತಾಲೂಕುಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಸೆಕ್ಷನ್ 144 ಘೋಷಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯ ಪರಿಶೀಲನೆ ನಡೆಸಿದ್ದಾರೆ.

Discussion about this post