ಬಿಜೆಪಿ ಜಿಲ್ಲಾ ಯುವ ಮುಖಂಡನ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ : ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳ ರವಾನೆ
ಸುಳ್ಯ : ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೇಲೆ ಮಾರಕಾಸ್ಚ್ರದಿಂದ ದಾಳಿ ನಡೆಸಲಾಗಿದೆ.
ಬೆಳ್ಳಾರೆ ಪೆಟ್ರೋಲ್ ಪಂಪ್ ಬಳಿ ಮಾಸ್ತಿಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದ್ದು, ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ ಪ್ರವೀಣ್ ನೆಟ್ಟಾರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗೊತ್ತಾಗಿದೆ. ದುಷ್ಕರ್ಮಿಗಳ ತಂಡವೊಂದು ಮಾರಾಕಾಸ್ತ್ರಗಳಿಂದ ದಾಳಿ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಪ್ರವೀಣ್ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗಿದೆ ಅನ್ನುವ ಮಾಹಿತಿ ಲಭ್ಯವಾಗಿದ್ದು, ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡಾ ಕೇಂದ್ರ ಸ್ಥಾನದಿಂದ ಸುಳ್ಯದತ್ತ ಹೊರಟಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗುತ್ತಿದೆ. ಪ್ರವೀಣ್ ಅವರು ಚಿಕನ್ ಅಂಗಡಿಯೊಂದನ್ನು ನಡೆಸುತ್ತಿದ್ದರು ಎಂದು ಗೊತ್ತಾಗಿದೆ.
ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Discussion about this post