ಎಡಿಜಿಪಿ ಅಲೋಕ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮೊಕ್ಕಾಂ ಹೂಡಿದ್ದು, (Praveen nettaru bellare) ಆರೋಪಿಗಳ ಪತ್ತೆಗಾಗಿ ಪೊಲೀಸ್ ತಂಡಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ
ಪುತ್ತೂರು : ಬಿಜೆಪಿ ಮುಖಂಡನ ಭೀಕರ ಹತ್ಯೆ ಪ್ರಕರಣ (Praveen nettaru bellare) ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಝಾಕೀರ್ ಸವಣೂರು ಮತ್ತು ಶಕೀರ್ ಬೆಳ್ಳಾರೆ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಗಾರರ ಬಂಧನಕ್ಕಾಗಿ 6 ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ಪೈಕಿ ಒಂದು ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ಬಂಧಿತ ಆರೋಪಿಗಳಿಗೆ ಕ್ರಿಮಿನಲ್ ಹಿನ್ನಲೆ ಇದೆ ಅನ್ನುವ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ಅಧಿಕೃತ ಹೇಳಿಕೆಗಳು ಇನ್ನೂ ಪೊಲೀಸರಿಂದ ಹೊರ ಬಿದ್ದಿಲ್ಲ. ಎಡಿಜಿಪಿ ಅಲೋಕ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಮಾಹಿತಿಯ ಪ್ರಕಾರ ಇಬ್ಬರು ಬಂಧಿಸಲಾಗಿದೆ. ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆಗಳಿವೆ (Praveen nettaru bellare)

ಈ ಇಬ್ಬರು ಆರೋಪಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿದ್ರ ಅನ್ನುವ ಕುರಿತಂತೆ ಮಾಹಿತಿಗಳು ಸಿಕ್ಕಿಲ್ಲ. ಆದರೆ ಕೊಲೆಗಡುಕರಿಗೆ ಪ್ರವೀಣ್ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ ಎಂದು ಗೊತ್ತಾಗಿದೆ.
ಇದನ್ನೂ ಓದಿ : Chakravarthy sulibele : ನಿರ್ವೀರ್ಯ ಸರ್ಕಾರಕ್ಕೆ ಇನ್ನೆಷ್ಟು ಪ್ರವೀಣರು ಹೆಣವಾಗಬೇಕು…
Discussion about this post