ಉಭಯ ಸದನಗಳನ್ನು ಉದ್ದೇಶಿಸಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ -Parliament Session 2024
Parliament Session 2024 : ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಿದರು.18ನೇ ಲೋಕಸಭೆಗೆ ಚುನಾವಣೆ ನಡೆದ ನಂತರ ಸಂಸತ್ತಿನ ಮೊದಲ ಜಂಟಿ ಅಧಿವೇಶನ ಇದಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ಅವರು, ಭಾರತ ಕಳೆದ 10 ವರ್ಷಗಳಿಂದ ಹಲವು ಕ್ಷೇತ್ರಗಳಲ್ಲಿ ಮಹತ್ವದ ಪ್ರಗತಿ ಸಾಧಿಸಿದ್ದು, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಎಲ್ಲಾ ಭಾಗಗಳಿಗೆ ಅನ್ವಯವಾಗುವಂತೆ ಸರ್ಕಾರ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ.
ವಿಕಸಿತ ಭಾರತಕ್ಕಾಗಿ ಸಂಕಲ್ಪ ಮಾಡಲಾಗಿದೆ ಎಂದರು. ಗ್ರಾಮೀಣ ಭಾಗಗಳ ರಸ್ತೆ, ಕುಡಿಯುವ ನೀರು ಸೇರಿದಂತೆ ಹಲವು ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆಯಾಗುತ್ತಿದೆ. ದೇಶದ ಆರ್ಥಿಕತೆ ಜಾಗತಿಕ ಮಟ್ಟದಲ್ಲಿ 5ನೇ ಸ್ಥಾನದಲ್ಲಿದ್ದು, 3ನೇ ಸ್ಥಾನಕ್ಕೆ ಏರಲು ಶ್ರಮಿಸುತ್ತಿದೆ. ಕೃಷಿ, ಕೈಗಾರಿಕೆ, ಸೇವಾ ವಲಯ, ಐಟಿ, ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ದೇಶದ 2 ಮತ್ತು 3ನೇ ಹಂತದ ನಗರಗಳ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ವಿಕಸಿತ ಭಾರತ ನಿರ್ಮಾಣಕ್ಕೆ ದೇಶದ ಪ್ರತಿಯೊಬ್ಬ ನಾಗರಿಕರು ತಮ್ಮ ಕೊಡುಗೆ ನೀಡುವುದು ಅವಶ್ಯವಾಗಿದೆ ಎಂದು ತಿಳಿಸಿದರು.ನಂತರ ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್, ಸರ್ಕಾರ ದೇಶದ ಆರ್ಥಿಕ ಪ್ರಗತಿಗೆ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ರೈತರ ಹಿತಾಸಕ್ತಿಯನ್ನು ಕಾಪಾಡಲು ಕಿಸಾನ್ ಸಮ್ಮಾನ್ ನಿಧಿ ಜಾರಿಗೊಳಿಸಿದೆ.
ರಕ್ಷಣಾ ಇಲಾಖೆಯು ರಫ್ತು ವಹಿವಾಟಿನಲ್ಲಿ ಮಹತ್ವದ ಸಾಧನೆ ಮಾಡಿದ್ದು, ಕಳೆದ 10 ವರ್ಷಗಳಲ್ಲಿ 21 ಸಾವಿರ ಕೋಟಿ ರೂಪಾಯಿ ವಹಿವಾಟು ನಡೆಸಿದೆ. ಭಾರತ ತನ್ನ ಅಭಿವೃದ್ಧಿಯ ಜತೆಗೆ ಜಾಗತಿಕ ಮಟ್ಟದ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು.
ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಚಿವರುಗಳ ಪರಿಚಯ ಮಾಡಿಕೊಟ್ಟರು.ನಂತರ ಉಭಯ ಸದನಗಳ ಕಲಾಪವನ್ನು ನಾಳೆ 11 ಗಂಟೆಗೆ ಮುಂದೂಡಲಾಯಿತು.
President Draupadi Murmu expressed her support and well-wishes to the Indian athletes participating in the upcoming Paris Olympics during her speech to a joint session of Parliament on Thursday.
Discussion about this post