ಯಾರಾಗಲಿದ್ದಾರೆ ಭಾರತದ ರಾಷ್ಟ್ರಪತಿ ಅನ್ನುವ ಕುತೂಹಲಕ್ಕೆ ಸಂಜೆ ತೆರೆ ಬೀಳಲಿದೆ.(President of India Draupadi Murmu) ಆಡಳಿತಾರೂಢ ಎನ್‌ಡಿಎಯ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷದ ಯಶವಂತ್ ಸಿನ್ಹಾ ಅವರ ನಡುವೆ ಸ್ಪರ್ಧೆ ಏರ್ಪಟ್ಟಿದ್ದು, ಮುರ್ಮು ಅವರೇ ಗೆಲುವು ಸಾಧಿಸುವುದು ಖಚಿತವಾಗಿದೆ.
ನವದೆಹಲಿ : ಭಾರತದ 15ನೇ ರಾಷ್ಟ್ರಪತಿ ಆಯ್ಕೆಗಾಗಿ (President of India Draupadi Murmu) ಮತ ಎಣಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಇಂದು ಸಂಜೆ ಅಧಿಕೃತವಾಗಿ ಫಲಿತಾಂಶ ಪ್ರಕಟಗೊಳ್ಳಲಿದೆ. 11 ಗಂಟೆಗೆ ಸಂಸತ್ ಭವನದ ಕೊಠಡಿ ಸಂಖ್ಯೆ 63ರಲ್ಲಿ ಫಲಿತಾಂಶ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಮುಖ್ಯ ಚುನಾವಣಾಧಿಕಾರಿ ಹಾಗೂ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಆಗಿರುವ ಪಿಸಿ ಮೋದಿಯವರು ಮತ ಎಣಿಕೆ ಕಾರ್ಯದ ಉಸ್ತುವಾರಿ ಹೊತ್ತಿದ್ದಾರೆ.
NDA ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲೆ ಮತ್ತು ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಬೆಂಬಲಿತ ಅಭ್ಯರ್ಥಿಯಾಗಿ ಟಿಎಂಸಿ ನಾಯಕರಾಗಿದ್ದ ಯಶವಂತ್ ಸಿನ್ಹಾ (Yashwant Sinha)ಕಣದಲ್ಲಿದ್ದಾರೆ. ಈಗಾಗಲೇ ದ್ರೌಪದಿ ಮುರ್ಮು (Draupadi Murmu) ಅವರ ಗೆಲುವು ಖಚಿತ ಅನ್ನಲಾಗಿದೆ. (President of India Draupadi Murmu)
ಇದನ್ನೂ ಓದಿ : leopard in bengaluru : ಕೆಂಪೇಗೌಡ ಬಡಾವಣೆಯಲ್ಲಿ ಚಿರತೆ ಹೆಜ್ಜೆ ಗುರುತು
ಮೊದಲು ಸಂಸದರ ಮತಗಳನ್ನು ಎಣಿಕೆ ಮಾಡಲಾಗುತ್ತದೆ. ಫಲಿತಾಂಷದ ಟ್ರೆಂಡ್ ವಿವರಿಸಿದ ನಂತರ ಇಂಗ್ಲೀಷ್ ವರ್ಣಮಾಲೆಯ ಅಕ್ಷರಗಳ ಆಧಾರದಲ್ಲಿ 10 ರಾಜ್ಯಗಳ ಮತ ಎಣಿಕೆ ಮಾಡುತ್ತಾರೆ. ಹೀಗೆ ಮುಂದುವರಿದುಕೊಂಡು ಹೋಗುತ್ತದೆ.
ಎಲ್ಲಾ ರಾಜ್ಯಗಳ ಮತ ಎಣಿಕೆ ಮುಕ್ತಾಯದ ನಂತರ ಸಂಜೆ ವೇಳೆ ಯಾರಿಗೆ ಎಷ್ಟು ಮತ ಬಂದಿದೆ ಅನ್ನುವುದನ್ನು ಮುಖ್ಯ ಚುನಾವಣಾಧಿಕಾರಿ ಪಿಸಿ ಮೋದಿಯವರು ಘೋಷಿಸುತ್ತಾರೆ.
ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ
ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಈ ಬಾರಿ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬೇಕು. SSLC supplementary resultಗೆ ಕಾಯುತ್ತಿರುವ ವಿದ್ಯಾರ್ಥಿಗಳು ಇದನ್ನು ಗಮನಿಸಿ
ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಪ್ರಸಕ್ತ ಸಾಲಿನ SSLC ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಬುಧವಾರ ಶೇ.39.59ರಷ್ಟು ಫಲಿತಾಂಶ ದಾಖಲಾಗಿದೆ. ಪರೀಕ್ಷೆ ಬರೆದಿದ್ದ 94 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ 37,479 ಮಂದಿ ಉತ್ತೀರ್ಣರಾಗಿದ್ದಾರೆ. ಎಂದಿನಂತೆ ವಿದ್ಯಾರ್ಥಿನಿಯರೇ ಈ ಬಾರಿ ಮೇಲುಗೈ ಸಾಧಿಸಿದ್ದು, ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಶೇ.37.99 ಸರ್ಕಾರಿ, ಶೇ.41.46 ಅನುದಾನಿತ ಮತ್ತು ಶೇ.40.68 ಖಾಸಗಿ ಶಾಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಳೆದ ಜೂ.27ರಿಂದ ಜು.4ರ ವರೆಗೆ ರಾಜ್ಯದ 423 ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆದಿದ್ದು, ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಹೋಲಿಸಿದರೆ ಈ ಬಾರಿಯ ಫಲಿತಾಂಶ ಸಮಾಧಾನ ತಂದಿಲ್ಲ. ಅತ್ಯಂತ ಕಡಿಮೆ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಗುರುವಾರ (ಜು.21) ಮಧ್ಯಾಹ್ನ 12 ಗಂಟೆಯ ಬಳಿಕ https://karresults.nic.in ಹಾಗೂ https://kseeb.karnataka.gov.in/sslcsupexamresults2022 ರಲ್ಲಿ ವೀಕ್ಷಿಸಬಹುದು. ರಾಜ್ಯದ ಎಲ್ಲಾ ಶಾಲೆಗಳ ಸೂಚನಾ ಫಲಕದಲ್ಲೂ ಗುರುವಾರ ಫಲಿತಾಂಶ ಪ್ರಕಟಗೊಂಡಿದೆ. ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಫಲಿತಾಂಶ ಪಟ್ಟಿ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಗುರುವಾರ ಮಧ್ಯಾಹ್ನ 1 ಗಂಟೆಯ ನಂತರ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಇನ್ನು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಜು.22ರಿಂದ 26ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಪರೀಕ್ಷಾ ಮಂಡಳಿ ತಿಳಿಸಿದ್ದು, ಆನ್‌ಲೈನ್‌ನಲ್ಲಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಅರ್ಜಿ ಸಲ್ಲಿಸಿದ ನಂತರ ಆಫ್‌ಲೈನ್‌ನಲ್ಲಿ ಚಲನ್ ಡೌನ್‌ಲೋಡ್ ಮಾಡಿಕೊಂಡು ಬ್ಯಾಂಕ್‌ನಲ್ಲಿ ಶುಲ್ಕ ಪಾವತಿಸಲು ಜು.27 ಕೊನೆಯ ದಿನವಾಗಿದೆ. ಉತ್ತರ ಪತ್ರಿಕೆಗಳ ಮರು ಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕೆ ಜು.25ರಿಂದ ಜು.31ರೊಳಗೆ ಅರ್ಜಿ ಸಲ್ಲಿಸಬಹುದು. ಮರು ಎಣಿಕೆಗಾಗಿ ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದ್ದು ಆಫ್ ಲೈನ್ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ.
ಯಾವುದೇ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗದಿದ್ದಲ್ಲಿ ಅಥವಾ ಫಲಿತಾಂಶ ತಡೆಹಿಡಿದಿದ್ದಲ್ಲಿ ಫಲಿತಾಂಶ ಪ್ರಕಟವಾದ 10 ದಿನದೊಳಗೆ ಮಂಡಳಿ ಸಹಾಯವಾಣಿಗೆ 080- 23310075/76, 080 23349434/23445579 ಸಂಪರ್ಕಿಸಬಹುದು ಎಂದು ಇದೇ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Discussion about this post