ನರೇಂದ್ರ ಮೋದಿ ಆಗಮನ ಹಿನ್ನಲೆಯಲ್ಲಿ ಸಂಚಾರ ಮಾರ್ಪಾಡು – ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಮಹತ್ವದ ಸೂಚನೆ
ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ 26ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಈ ಬಗ್ಗೆ ಮಾಜಿ ಸಚಿವ ಆರ್.ಅಶೋಕ್ ವಿವರಗಳನ್ನು ಕೊಟ್ಟಿದ್ದು, ಮೋದಿಯವರ ಸ್ವಾಗತಕ್ಕೆ ಅದ್ದೂರಿ ಸಿದ್ದತೆಗಳನ್ನು ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಸಿದ್ದತೆಗಳನ್ನು ಗಮನಿಸಿದರೆ ಮೋದಿ ಆಗಮನದಿಂದ ಲೋಕಸಭಾ ಚುನಾವಣೆಗೇನಾದ್ರೂ ಲಾಭವಾಗಬಹುದು ಅನ್ನುವ ಲೆಕ್ಕಚಾರ ರಾಜ್ಯ ಬಿಜೆಪಿಯದ್ದು.
ಆ.26ಕ್ಕೆ ನಗರದ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗಮಿಸಲಿದ್ದು, ಅವರ ಸ್ವಾಗತಕ್ಕೆ 5 ಸಾವಿರ ಜನ ಸೇರಿಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ.
ಇನ್ನು ಇಸ್ರೋ ಸಂಸ್ಥೆ ಇರುವ ಪ್ರದೇಶದಲ್ಲಿ ಮೋದಿಯವರು ಬಂದಾಗ ರೋಡ್ ಶೋ ಮಾಡಲು ಕೇಂದ್ರ ಬಿಜೆಪಿಯಿಂದ ಸೂಚನೆಗಳು ಬಂದಿದ್ದು, ರಾಜ್ಯ ಬಿಜೆಪಿ ರೋಡ್ ಶೋ ನಡೆಸಲು ತೀರ್ಮಾನಿಸಿದೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನಲೆಯಲ್ಲಿ ಆ.26ರ ಬೆಳಗಿನಜಾವ 4:30ರಿಂದ ಬೆಳಗ್ಗೆ 9:30ರ ವರೆಗೆ ಹಳೆ ವಿಮಾನ ನಿಲ್ದಾಣ ರಸ್ತೆ, ಹಳೆ ಮದ್ರಾಸ್ ರಸ್ತೆ, ಎಂಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಮೇಖ್ರಿ ಸರ್ಕಲ್, ಯಶವಂತಪುರ ಪ್ಲೈ ಓವರ್, ತುಮಕೂರು ರಸ್ತೆಯಲ್ಲಿ (ಯಶವಂತಪುರದಿಂದ ನಾಗಸಂದ್ರದ ವರೆಗೆ) ಸೇರಿದಂತೆ ಆ ಭಾಗದ ವಿವಿಧ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.
Discussion about this post