ಬೆಂಗಳೂರು : ರಾಜಧಾನಿಯಲ್ಲಿ ಮತ್ತೆ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ( prostitution in Bengaluru ) ಪ್ರಾರಂಭವಾಗಿದೆ. ಅಕ್ರಮವಾಗಿ ತಲೆ ಎತ್ತುವ ಈ ಸ್ಫಾಗಳಿಗೆ ಸ್ಥಳೀಯ ಪೊಲೀಸ್ ಠಾಣೆಯ ಕೃಪಾಕಟಾಕ್ಷವಿರುತ್ತದೆ. ಠಾಣಾ ವ್ಯಾಪ್ತಿಯಲ್ಲಿ ಏನಿದೆ ಏನಿಲ್ಲ ಎಂದು ಅರಿಯದಷ್ಟು ದಡ್ಡರಲ್ಲ ಠಾಣೆಯ ಇನ್ಸ್ ಪೆಕ್ಟರ್ ಗಳು. ಗೃಹ ಸಚಿವರು ಇಚ್ಛಾ ಶಕ್ತಿ ತೋರಿದ್ರೆ ಖಂಡಿತಾ ಈ ದಂಧೆಗೆ ಬ್ರೇಕ್ ಹಾಕಲು ಸಾಧ್ಯವಿದೆ.
ಹೀಗೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ( prostitution in Bengaluru ) ನಡೆಸುತ್ತಿದ್ದ ಗಿರಾಕಿ ಕೇಂದ್ರಗಳಿಗೆ ಸಿಸಿಬಿ ಪೊಲೀಸರು ದಾಳಿ ಮಾಡಿ 4 ಮಂದಿಯನ್ನು ಬಂಧಿಸಿದ್ದಾರೆ. ಇದೇ ವೇಳೆ 8 ಮಂದಿ ಯುವತಿಯರನ್ನು ರಕ್ಷಿಸಲಾಗಿದೆ.
ಇಂದಿರಾನಗರದ 100 ಅಡಿ ರಸ್ತೆಯ ನೆಸ್ಟ್ ಟು ಗ್ಲೇನ್ ಬೇಕ್ ಹೌಸ್ ಬಳಿ ಇರುವ ಐರಾ ಸ್ಪಾ ಅಂಡ್ ವೆಲ್ ನೆಸ್ ಸೆಂಟರ್ ತೆರೆದು ಹೊರ ರಾಜ್ಯದ ಯುವತಿಯರನ್ನು ಅಕ್ರಮವಾಗಿ ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಜಾಲವನ್ನು ಬೇಧಿಸಿರುವ ಪೊಲೀಸರು ಆರೋಪಿಗಳಾದ ರೂಬಿ ಮತ್ತು ನಿರಂಜನ್ ಎಂಬವರನ್ನು ಬಂಧಿಸಿದ್ದಾರೆ. ಇಲ್ಲಿ ನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ.
ಇದನ್ನು ಓದಿ : Car theft : ವೇಶ್ಯಯರ ಸಂಗಕ್ಕಾಗಿ ಕಾರು ಕದಿಯುತ್ತಿದ್ದ ಖದೀಮನ ಬಂಧನ
ಮತ್ತೊಂದು ಪ್ರಕರಣದಲ್ಲಿ ಜೆಪಿ ನಗರದ 5ನೇ ಹಂತದಲ್ಲಿ ರೂಹಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಆರೋಪಿಗಳಾದ ಶರೀಫ್ ಹಾಗೂ ರಾಜಶೇಖರ್ ಅನ್ನುವವರನ್ನು ಬಂಧಿಸಿದ್ದಾರೆ. ಇಲ್ಲೂ ರಾಜ್ಯ ಹಾಗೂ ವಿದೇಶದ 4 ಮಂದಿ ಯುವತಿಯರನ್ನು ರಕ್ಷಿಸಲಾಗಿದೆ.
ಈ ಎರಡೂ ಪ್ರಕರಣಗಳನ್ನು ಗಮನಿಸಿದರೆ ಸಿಸಿಬಿ ದಾಳಿ ಮಾಡಿದ ಬಳಿಕ ದಂಧೆ ಬೆಳಕಿಗೆ ಬಂದಿದೆ. ಸ್ಥಳೀಯ ಪೊಲೀಸ್ ಠಾಣೆಗಳಿಗೆ ಹಾಗಾದ್ರೆ ಈ ದಂಧೆಯ ಬಗ್ಗೆ ಮಾಹಿತಿ ಇರಲಿಲ್ವ. ತಮ್ಮ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ, ಕಾನೂನು ಬಾಹಿರ ಕೃತ್ಯ ನಡೆಯುತ್ತಿರುವುದು ಸ್ಥಳೀಯ ಪೊಲೀಸ್ ಇನ್ಸ್ ಪೆಕ್ಟರ್ ಗೆ ಗೊತ್ತಿಲ್ಲ ಅಂದ್ರೆ ಅದು ಕರ್ತವ್ಯಲೋಪವಾಗೋದಿಲ್ವ ಗೃಹ ಸಚಿವರೇ ಇದಕ್ಕೆ ಉತ್ತರಿಸಬೇಕು.
ನಳಿನ್ ಕುಮಾರ್ ಕಟೀಲು ಅವರಿಗೆ ಶಾಕ್ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸೂಚನೆಯಂತೆ ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಸೇರಿದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶಿಸಲಾಗಿದೆ. ಮಾಹಿತಿಗಳ ಪ್ರಕಾರ ಹೊಸ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ. ಈಗಾಗಲೇ ಹೊಸಬರ ನೇಮಕಕ್ಕೆ ಪಟ್ಟಿ ಸಿದ್ಧವಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ.
ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಕ್ ಕೊಟ್ಟಿದ್ದಾರೆ. ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಸಂತೋಷ್ ರೈ ಬೋಳಿಯಾರ್ ಅವರನ್ನೂ ಇದೀಗ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ.
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯುಟಿ ಖಾದರ್ ವಿರುದ್ಧ ಸ್ಪರ್ಧಿಸಿದ್ದ ಬೋಳಿಯಾರ್, ದೊಡ್ಡ ಮಟ್ಟಿಗೆ ಫೈಟ್ ಕೊಟ್ಟಿದ್ದರು. ಹಿಂದುತ್ವದ ವಿಷಯದಲ್ಲಿ ದಕ್ಷಿಣ ಕನ್ನಡದ ಉಳಿದ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಪ್ರಚಾರ ಮಾಡಿದ್ರೆ, ಸಂತೋಷ್ ಕುಮಾರ್ ಬೋಳಿಯಾರ್ ಸರ್ವ ಜನಾಂಗದ ಶಾಂತಿಯ ತೋಟ ಎಂದು ಪ್ರಚಾರ ನಡೆಸಿದ್ದರು. ಅಲ್ಪಸಂಖ್ಯಾತರ ಮತ ಪಡೆಯವಲ್ಲಿ ಬೋಳಿಯಾರ್ ಯಶಸ್ವಿಯೂ ಆಗಿದ್ದರು.
ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷರಾದ ಬಳಿಕ ಆಲ್ಲಿನ CRS Fund ಅನ್ನು ತಾವು ಸೋತ ಕ್ಷೇತ್ರಕ್ಕೆ ತರಿಸಿಕೊಂಡು ಮುಂಬರುವ ಚುನಾವಣೆಗೆ ಸಿದ್ದತೆಗಳನ್ನೂ ನಡೆಸಿದ್ದರು. ನಳಿನ್ ಕುಮಾರ್ ಕಟೀಲ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಂತೋಷ್ ಕುಮಾರ್ ಬೋಳಿಯಾರ್ ಅವರ ಅಧಿಕಾರ ಕಿತ್ತುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.
Discussion about this post