ಸ್ನೇಹಿತರ ಮನೆಗೆ ಬಂದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ICUಗೆ ದಾಖಲಿಸಲಾಗಿದೆ -Puttur
ಪುತ್ತೂರು : ಬಹು ಮಹಡಿ ಕಟ್ಟಡದ ಮಹಡಿಯೊಂದರಿಂದ ಬಿದ್ದು ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರು Puttur ತಾಲೂಕಿನ ಬೊಳುವಾರಿನಲ್ಲಿ ನಡೆದಿದೆ.
ಗಾಯಗೊಂಡ ಬಾಲಕನನ್ನು ಮಂಜಲಪಡ್ಪುವಿನ ಸುದಾನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾನ್ ರೈ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : Police fight : ಊಟದ ವಿಚಾರಕ್ಕೆ ಕಿತ್ತಾಡಿಕೊಂಡ ಮಂಗಳೂರು ಮತ್ತು ಚಿಕ್ಕಮಗಳೂರು ಪೊಲೀಸರು
ಬೊಳುವಾರಿನಲ್ಲಿರುವ ಕೀರ್ತನಾ ಅಪಾರ್ಟ್ ನೆಂಟ್ ಗೆ ಸ್ನೇಹಿತನ ಮನೆಗೆ ಬಂದ ವೇಳೆ ಈ ದುರ್ಘಟನೆ ಸಂಭವಿಸಿ ಅನ್ನಲಾಗಿದೆ.
ಶುಕ್ರವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನ್ನು ಇದೀಗ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post