ಗೃಹ ಮಂಡಳಿಯಿಂದ ಜಮೀನು ಪಡೆದು ಕಾಲೇಜು ಕಟ್ಟಡ ನಿರ್ಮಾಣ
“ರಾಜೀವ್ ಗಾಂಧಿ ವೈದ್ಯಕೀಯ ವಿವಿಯನ್ನು ಹಂತ ಹಂತವಾಗಿ ರಾಮನಗರಕ್ಕೆ ಸ್ಥಳಾಂತರ ಹಾಗೂ ಕನಕಪುರ ಮೆಡಿಕಲ್ ಕಾಲೇಜಿಗೆ ಮೂಲಸೌಕರ್ಯ ಹೆಚ್ಚಿಸಿ ಎನ್ ಎಂ ಸಿ ಗೆ ಮರು ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಶಿವಕುಮಾರ್ “ರಾಮನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಇರುವ ಭೂ ಸ್ವಾಧೀನ ಸಮಸ್ಯೆಗೆ ಪರಿಹಾರ ನೀಡಿ ಕಾಮಗಾರಿ ನಡೆಸಲಾಗುತ್ತಿದೆ.
ರಾಮನಗರದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭ ಮಾಡಲು ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ. ವೈದ್ಯಕೀಯ ವಿವಿ ಕೇಂದ್ರ ಕಚೇರಿಯನ್ನು ರಾಮನಗರಕ್ಕೆ ಸ್ಥಳಾಂತರಗೊಳಿಸಲು ಸೂಚಿಸಿದ್ದೇನೆ.
ಈ ವಿಚಾರವಾಗಿ ಈ ಹಿಂದೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು” ಎಂದು ತಿಳಿಸಿದರು. “ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿತ್ತು.
ಗೃಹ ಮಂಡಳಿಯಿಂದ ಜಮೀನು ಪಡೆದು ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಮಾಹಿತಿ ನೀಡಿದರು.