ಬೆಂಗಳೂರು : ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ, ಐಪಿಎಸ್ ಅಧಿಕಾರಿ ಕೆ. ರತ್ನ ಪ್ರಭಾ ಆಂಧ್ರ ಪ್ರದೇಶದ ತಿರುಪತಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳು ನಿಚ್ಚಳವಾಗಿದೆ.
ಆಂಧ್ರ ಮಾಜಿ ಸಿಎಂ ವೈ ಎಸ್ ರಾಜಶೇಖರ್ ರೆಡ್ಡಿ ಅವಧಿಯಲ್ಲಿ ಆಂಧ್ರ ಪ್ರದೇಶ ಸರ್ಕಾರದಲ್ಲೂ ಕೆಲಸ ಮಾಡಿದ ಅನುಭವ ಹೊಂದಿರುವ ರತ್ನ ಪ್ರಭಾ ಬಿಜೆಪಿ ಮತ್ತು ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದ ಜಂಟಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳಿದೆ.
ತಿರುಪತಿ ಲೋಕಸಭಾ ಕ್ಷೇತ್ರ ಇದೀಗ ಖಾಲಿಯಾಗಿದ್ದು, ಕೆಲವೇ ದಿನಗಳಲ್ಲಿ ಉಪಚುನಾವಣೆ ಘೋಷಣೆಯಾಗುವುದನ್ನು ನಿರೀಕ್ಷಿಸಲಾಗುತ್ತಿದೆ.
Discussion about this post