ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ನೀಡಕೂಡದು
ಹುಬ್ಬಳ್ಳಿಯಲ್ಲಿ ಒಂಬತ್ತು ಹಾಗೂ ಹನ್ನೊಂದನೇ ದಿನದ ಗಣಪತಿ ವಿಸರ್ಜನೆ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸುವ ಸಲುವಾಗಿ ಪೊಲೀಸ್ ಕಮಿಷನರೇಟ್ ವತಿಯಿಂದ ನಗರದ ವಿವಿಧ ಪ್ರದೇಶಗಳಲ್ಲಿ ರೂಟ್ ಮಾರ್ಚ್ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಬಳಿಕ ಮಾತನಾಡಿದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ನಗರದಲ್ಲಿನ ಪ್ರಮುಖ ಪ್ರದೇಶಗಳಲ್ಲಿನ ಗಣಪತಿಗಳು ಹನ್ನೊಂದನೇ ದಿನಕ್ಕೆ ವಿಸರ್ಜನೆ ಮಾಡಲಾಗುತ್ತದೆ ಹೀಗಾಗಿ ಇಲ್ಲಿನ ಗಣೇಶನ ಮೂರ್ತಿಗಳನ್ನು ನೋಡಲು ನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಬರುತ್ತಿರೋ ಹಿನ್ನೆಲೆ ಪೊಲೀಸ್ ಇಲಾಖೆಯಿಂದ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗ್ತಿದೆ ಎಂದು ತಿಳಿಸಿದರು.
ರಾಜ್ಯ ಸೇರಿದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಈ ಬಾರಿ ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ನೀಡಕೂಡದು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಜಿಲ್ಲಾ ಘಟಕ ಕಾರ್ಯಕರ್ತರು ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಕಳೆದ ಬಾರಿ ರಾಗಿಗುಡ್ಡದಲ್ಲಿ ಕೋಮು-ಸೌಹಾರ್ದ ಕದಡುವ ಹುನ್ನಾರ ನಡೆದಿತ್ತು. ಈ ಬಾರಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ನೀಡಕೂಡದು ಎಂದು ಆಗ್ರಹಿಸಿದರು.