ಹಳಿಯಾಳದಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ
ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸದುಪಯೋಗವಾಗಬೇಕು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಆರ್.ವಿ ದೇಶಪಾಂಡೆ ತಿಳಿಸಿದ್ದಾರೆ.
ಉತ್ತರ ಕನ್ನಡದ ಹಳಿಯಾಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕಿನ ೨೯ ಸಾವಿರದ ೮೩ ಫಲಾನುಭವಿಗಳಿಗೆ ಈವರೆಗೆ ೬೬ ಕೋಟಿ ೭೦ ಲಕ್ಷ ರೂಪಾಯಿ ಜಮಾ ಆಗಿದೆ. ಅನ್ನಭಾಗ್ಯ ಯೋಜನೆಯಡಿ ೧೪ ಕೋಟಿ ೩೨ ಲಕ್ಷ ರೂಪಾಯಿ ವ್ಯಯ ಮಾಡಲಾಗಿದ್ದು, ಅರ್ಹ ಫಲಾನುಭವಿಗಳು ಮಾತ್ರ ಯೋಜನೆಯ ಲಾಭ ಪಡೆದುಕೊಳ್ಳಿ’ ಎಂದು ಹೇಳಿದರು.