ಧಿಡೀರ್ ನಡೆದ ಬೆಳವಣಿಗೆಯೊಂದರಲ್ಲಿ ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಪ್ರಜ್ಞಾ ಠಾಕೂರ್ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.
ಹಾಗಂತ ನಾಮಪತ್ರ ವಾಪಾಸ್ ಪಡೆದವರು ಬಿಜೆಪಿಯಿಂದ ಸ್ಪರ್ಧಿಸಿರುವ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅಲ್ಲ. ಬದಲಿಗೆ ನಾಮಪತ್ರ ವಾಪಾಸ್ ಪಡೆದವರು ಪ್ರಜ್ಞಾ ಠಾಕೂರ್.
ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಪ್ರಜ್ಞಾ ಠಾಕೂರ್ ಪಕ್ಷೇತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಇದು ಬಿಜೆಪಿಗೆ ದೊಡ್ಡ ತಲೆನೋವು ತಂದಿತ್ತು. ಒಂದೇ ಹೆಸರಿನ ಅಭ್ಯರ್ಥಿಗಳಿದ್ದರೆ ತೊಂದರೆಯಾಗುತ್ತದೆ. ಇದರ ಲಾಭ ಕಾಂಗ್ರೆಸ್ ಪಡೆದುಕೊಳ್ಳುವ ಭೀತಿ ಎದುರಾಗಿತ್ತು.
ಇದೀಗ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಸ್ವತಂತ್ರ ಅಭ್ಯರ್ಥಿ ಪ್ರಜ್ಞಾ ಠಾಕೂರ್ ಅವರ ಮನವೊಲಿಸಿದ್ದಾರೆ. ಹೀಗಾಗಿ ಪಕ್ಷೇತರ ಅಭ್ಯರ್ಥಿ ತಮ್ಮ ನಾಮಪತ್ರವನ್ನು ವಾಪಸ್ ತೆಗೆದುಕೊಂಡಿದ್ದಾರೆ.
ಮಾತುಕತೆ ಫಲಪ್ರದವಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಪ್ರಜ್ಞಾ ಠಾಕೂರ್ ಅವರಿಗೆ ಶಾಲು ಹೊದಿಸಿ, ಸನ್ಮಾನ ಮಾಡಿದ್ದಾರೆ.
Discussion about this post