ಬೆಂಗಳೂರು :ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ನಟಿ ಅಮೃತಾ ನಾಯ್ಡು ಮಗಳು ಸಮನ್ವಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ಅಮೃತಾ ನಾಯ್ಡು ಹಾಗೂ ಸಮನ್ವಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ 6 ವರ್ಷದ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದು, ಅಮೃತಾ ನಾಯ್ಡು ಅವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
![amrutha naidu2](https://torrentspree.com/wp-content/uploads/2022/01/amrutha-naidu2.jpg)
ಇದೀಗ ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಮೃತಾ ನಾಯ್ಡು ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳಾಗಿದ್ದಾರೆ.
ಅಮೃತಾ ನಾಯ್ಡು 25ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಅಮೃತಾ ನಟಿಸಿದ್ದಾರೆ. ಗಂಗೋತ್ರಿ, ಪುಣ್ಯಕೋಟಿ, ಕುಸುಮಾಂಜಲಿ, ಮನೆಯೊಂದು ಮೂರು ಬಾಗಿಲು, ಅಮೃತ ವರ್ಷಿಣಿ ಇದರಲ್ಲಿ ಪ್ರಮುಖವಾದುದು.
![amrutha naidu1](https://torrentspree.com/wp-content/uploads/2022/01/amrutha-naidu1.jpg)
Discussion about this post