- Advertisement -
- Advertisement -
ಡ್ರಗ್ಸ್ ವ್ಯವಹಾರ ಆರೋಪದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿಯವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಹಲವು ದಿನಗಳ ಕಾಲ ವಿಚಾರಣೆ ಬಳಿಕ ಸುಪ್ರೀಂಕೋರ್ಟ್ ಇಂದು ಜಾಮೀನು ಭಾಗ್ಯ ಕೊಟ್ಟಿದ್ದು, ಈ ಮೂಲಕ 140 ದಿನಗಳ ಜೈಲು ವಾಸದಿಂದ ರಾಗಿಣಿ ಮುಕ್ತಿ ಪಡೆಯಲಿದ್ದಾರೆ.
ಈ ಹಿಂದೆ ಕೆಳ ಹಂತದ ನ್ಯಾಯಾಲಯಗಳಲ್ಲಿ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ರಾಗಿಣಿ ಜಾಮೀನು ಪಡೆಯುವಲ್ಲಿ ವಿಫಲರಾಗಿದ್ದರು. ಇದಾದ ಬಳಿಕ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದ ರಾಗಿಣಿ ಇದೀಗ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಸೆ.4 ರಂದು ನಟಿ ರಾಗಿಣಿ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಅಂದೇ ನಟಿಯನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಸೆ. 14ರವರೆಗೆ ಪೊಲೀಸ್ ಕಸ್ಟಡಿಯಲ್ಲಿದ್ದರು.
ಸೆ. 15ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಸೆ. 29 ರಂದು ನಟಿ ರಾಗಿಣಿ ಜಾಮೀನು ಕೋರಿ ಅರ್ಜಿ ಸಲ್ಲಿದ್ದರು. ಆದರೆ ಜಾಮೀನು ಸಿಕ್ಕಿರಲಿಲ್ಲ.
- Advertisement -