ಬೆಂಗಳೂರು : ರಾಜ್ಯ ಸರ್ಕಾರ ತಮ್ಮನ್ನು ಕಡೆಗಣಿಸಿ ಅಗೌರವ ಸೂಚಿಸಿದೆ ಎಂದು ಬೇಸರಗೊಂಡಿರುವ ಕನ್ನಡಿಗ ಐಪಿಎಸ್ ಅಧಿಕಾರಿ ಸರ್ಕಾರಿ ಸೇವೆಗೆ ರಾಜೀನಾಮೆ ಕೊಡಲು ಭಾಸ್ಕರ ರಾವ್ ನಿರ್ಧರಿಸಿದ್ದಾರೆ. ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವಾವಧಿ ಇನ್ನೂ 3 ವರ್ಷಗಳ ಕಾಲ ಇದೆ.
ಈಗಾಗಲೇ ತಮ್ಮ ರಾಜೀನಾಮೆ ಸಂಬಂಧ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿರುವ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗಂತ ಮುಂದೇನು ಮಾಡುತ್ತೇನೆ ಅನ್ನುವುದನ್ನು ಹೇಳಿಲ್ಲ. ಮಾಹಿತಿಗಳ ಪ್ರಕಾರ ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ ರಾಜಕೀಯ ಪ್ರವೇಶಿಸುವುದು ಪಕ್ಕಾ ಎನ್ನಲಾಗಿದೆ.ಬೆಂಗಳೂರಿನ ಬಸವನಗುಡಿ ಅಥವಾ ಜಯನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸುವ ಕನಸು ಕಾಣುತ್ತಿದ್ದಾರೆ.
1990ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರರಾವ್, ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿದ್ದರು. ಬೆಂಗಲೂರು ಹಾಗೂ ಮೈಸೂರು ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಅವರು ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ.
Bhaskar Rao is not happy with the way the state government treated him. The 1990-batch IPS officer, who also served as the Bengaluru city police commissioner, still has three years of service left.
Discussion about this post