ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಕಳೆದ ವಿಧಾನಸಭಾ ಚುನಾವಣೆ ಬಳಿಕ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಉರುಳುತ್ತಿದ್ದಂತೆ ದೂರವಾಗಲು ನಿರ್ಧರಿಸಿದೆ ಎನ್ನಲಾಗಿದೆ.
ಮೈತ್ರಿ ಮುಂದುವರಿಸುವ ಕುರಿತಂತೆ ದಳಪತಿಗಳು ಕಾಂಗ್ರೆಸ್ ರಾಜ್ಯ ನಾಯಕರ ಕಡೆಗೆ ಕೈ ತೋರಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಾಷ್ಟ್ರೀಯ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಕುಮಾರಸ್ವಾಮಿ ಮೈತ್ರಿ ಮುಂದುವರಿಕೆ ನಿರ್ಧಾರ ರಾಜ್ಯ ಕಾಂಗ್ರೆಸ್ ನಾಯಕರ ನಿರ್ಧಾರದ ಮೇಲೆ ಅವಲಂಬಿತವಾಗಿದೆ ಅನ್ನುವ ಹೇಳಿಕೆ ಕೊಟ್ಟಿದ್ದರು.
ಈ ಹಿಂದೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದು ರಾಷ್ಟ್ರೀಯ ಕಾಂಗ್ರೆಸ್ ನಾಯಕರು, ಆಗ ರಾಜ್ಯ ನಾಯಕರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಸಿಕ್ಕಿರಲಿಲ್ಲ. ಇದೀಗ ಮೈತ್ರಿ ಮುಂದುವರಿಕೆ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ನಾಯಕರು ಕೈಗೊಳ್ಳಬೇಕು ಅನ್ನುವ ಮೂಲಕ ಮೈತ್ರಿ ಅಂತ್ಯದ ಮುನ್ಸೂಚನೆಯನ್ನು ಕುಮಾರಸ್ವಾಮಿ ಕೊಟ್ಟಿದ್ದರು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”69″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6920190802083719″);
document.getElementById(“div_6920190802083719”).appendChild(scpt);
ಇದರ ಬೆನ್ನಲ್ಲೇ ಗುರುವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ನಾಯಕರ ಸಭೆ ನಡೆದಿದ್ದು, ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುವ ಬಗ್ಗೆ ಬಹುತೇಕ ನಾಯಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಸರ್ಕಾರದ ಪತನಕ್ಕೆ ಕಾರಣರಾದ ಶಾಸಕರ ಕ್ಷೇತ್ರದಲ್ಲಿ ಮತ್ತೆ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಲು ನಿರ್ಧರಿಸಿದ್ದು, ಹದಿನೇಳು ಕ್ಷೇತ್ರಗಳಲ್ಲಿ ವಸ್ತು ಸ್ಥಿತಿ ತಿಳಿಯಲು ಹಿರಿಯ ನಾಯಕರ ನೇತೃತ್ವದಲ್ಲಿ ವೀಕ್ಷಕರ ತಂಡ ರಚನೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಈಗಾಗಲೇ ತಳಮಟ್ಟದಲ್ಲಿ ಮೈತ್ರಿ ಬಗ್ಗೆ ಕಾರ್ಯಕರ್ತರಲ್ಲಿ ಆಕ್ರೋಶವಿದೆ. ಇದು ಲೋಕಸಭಾ ಚುನಾವಣೆಯಲ್ಲೂ ಪರಿಣಾಮ ಬೀರಿದೆ. ಹೀಗಾಗಿ ಮೈತ್ರಿಯೊಂದಿಗೆ ಉಪ ಚುನಾವಣೆ ಎದುರಿಸಿದರೆ ಬಿಜೆಪಿ ಲಾಭ ಗಳಿಸುವುದು ಖಚಿತ. ಜೊತೆಗೆ ಕಾಂಗ್ರೆಸ್ ಪಕ್ಷದ ಸಂಘಟನೆಗೂ ಪೆಟ್ಟು ಕೊಡಲಿದೆ. ಹೀಗಾಗಿ ಮೈತ್ರಿ ಅನ್ನುವುದು ಇರಲಿ, ನಮ್ಮ ಶಾಸಕರು ರಾಜೀನಾಮೆ ಕೊಟ್ಟಿರುವ ಕ್ಷೇತ್ರಗಳಲ್ಲಿ ನಮ್ಮದೇ ಆಭ್ಯರ್ಥಿ ಹಾಕೋಣ ಅನ್ನುವ ಅಭಿಪ್ರಾಯ ಸಭೆಯಲ್ಲಿ ಬಂದಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190802083719″);
document.getElementById(“div_6020190802083719”).appendChild(scpt);
Discussion about this post