ಭಾರೀ ಮಳೆ ಹಿನ್ನಲೆಯಲ್ಲಿ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ
ರಾಜ್ಯದಲ್ಲಿ ಇಂದಿನಿಂದ ಇದೇ ೨೦ ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ನಿಟ್ಟಿನಲ್ಲಿ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಜಲಾಶಯಗಳಲ್ಲಿ ನೀರು ಅಪಾಯ ಮಟ್ಟಕ್ಕೆ ಬಂದಿರುವುದು. ತುಂಗಾಭದ್ರಾ ಅಣೆಕಟ್ಟೆಯ ಕ್ರಸ್ಟ್ಗೇಟ್ ಚೇನ್ ಲಿಂಕ್ ತುಂಡಾಗಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಮಳೆ ಸಂಬಂಧಿ ದುರಂತಗಳ ಕುರಿತು ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ದಕ್ಷಿಣ ಒಳನಾಡು ಪ್ರದೇಶವನ್ನು ಹೊರತುಪಡಿಸಿ ಉಳಿದೆಡೆಗಳಲ್ಲಿ ನೈರುತ್ಯ ಮುಂಗಾರು ಆಗಮಿಸಿದೆ.
ಆಗಸ್ಟ್ 14 ರಿಂದ ಕಿತ್ತೂರು ಕರ್ನಾಟಕ ಮತ್ತು ಮಲೆನಾಡು ಪ್ರದೇಶಗಳಲ್ಲಿ ಆಗಸ್ಟ್ ೨೦ವರೆಗೆ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕ-ಮಹಾರಾಷ್ಟ್ರ ಗಡಿಭಾಗ ಹಾಗೂ ಕೃಷ್ಣ-ಕಾವೇರಿ ನದಿಪಾತ್ರದ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ಈ ನಿಟ್ಟಿನಲ್ಲಿ ಅನಾಹುತ ತಪ್ಪಿಸಲು ಮತ್ತಷ್ಟು ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
Heavy rainfall is also likely along the Karnataka-Maharashtra border. Deputy commissioners have been instructed to take precautionary measures to prevent flood situations,’ Revenue Minister Krishna Byre Gowda said.