ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಖ್ಯಾತ ಬಾಲಿವುಡ್ ನಟಿ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಕ್ಷೇತ್ರಕ್ಕೆ ಆಗಮಿಸಿ ಕಟೀಲು ಶ್ರೀ ದೇವಿಯ ದರ್ಶನ ಪಡೆದಿದ್ದಾರೆ.
ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ತುಳುವಿನಲ್ಲೇ ಮಾತನಾಡಿದ ಅವರು ಅವರು, ಕ್ಷೇತ್ರಕ್ಕೆ ಬರಬೇಕು ಎಂದು ತುಂಬಾ ಆಸೆ ಇತ್ತು. ಕಟೀಲು ದೇವರ ಅನುಗ್ರಹದಿಂದ ನಾನು ಇಷ್ಟೆಲ್ಲ ಸಾಧನೆ ಮಾಡಲು ಸಾಧ್ಯವಾಯಿತು. ಹೀಗಾಗಿ ಬ್ರಹ್ಮಕಲಶದ ಈ ಸಂದರ್ಭದಲ್ಲಿ ದೇವಿಗೆ ಪೂಜೆ ಸಲ್ಲಿಸಲು ಬಂದಿದ್ದೇನೆ ಎಂದರು.
Discussion about this post