ಚಿತ್ರದುರ್ಗ : ಶಿಕ್ಷಣ ಇಲಾಖೆ ವತಿಯಿಂದ ನೀಡಲಾಗುವ ಬಿಸಿಯೂಟದಲ್ಲಿ ಸಿರಿಧಾನ್ಯ ನೀಡುವ ಕುರಿತಂತೆ ಶಿಕ್ಷಣ ಇಲಾಖೆಗೆ ಸಲಹೆ ನೀಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ( sanehalli ) ತರಳಬಾಳು ಶಾಖಾ ಮಠದಲ್ಲಿ ಶಿವಸಂಚಾರ ನಾಟಕೋತ್ಸವ ಬೆಳ್ಳಿಹಬ್ಬ ಸಮಾರಂಭದಲ್ಲಿ ಮಾತನಾಡಿದ ಸಚಿವರು ಬಿಸಿಯೂಟದಲ್ಲಿ ಸಿರಿಧಾನ್ಯ ನೀಡುವುದರಿಂದ ಮಕ್ಕಳಿಗೆ ಅನುಕೂಲವಾಗುವುದು ಮಾತ್ರವಲ್ಲದೆ, ಸಿರಿ ಧಾನ್ಯ ಬೆಳೆಯಲು ರೈತರಿಗೂ ಪ್ರೋತ್ಸಾಹ ನೀಡದಂತಾಗುತ್ತದೆ ಅಂದರು.

ಈ ಸಂಬಧ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಶೀಘ್ರದಲ್ಲೇ ಈ ಬಗ್ಗೆ ಆದೇಶ ಹೊರಡಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಇದೇ ವೇಳೆ 2023 ಕ್ಕೆ ಅಂತರರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮೇಳ ಆಯೋಜಿಸಲು ಸಿದ್ದತೆಗಳು ನಡೆದಿದ್ದು, ಇದರಿಂದ ಸಿರಿ ಧಾನ್ಯ ಬೆಳೆಗಾರರಿಗೆ ಮುಂದಿನ ದಿನಗಳಲ್ಲಿ ಸುವರ್ಣ ದಿನಗಳು ಕಾದಿದೆ ಎಂದು ಸಚಿವರು ಹೇಳಿದ್ದಾರೆ.

ಸಿರಿಧಾನ್ಯವನ್ನು ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ನೀಡಲಾಗುವುದು ಅನ್ನುವ ಬಿ.ಸಿ.ಪಾಟೀಲ ಹೇಳಿಕೆ ಕೇಳುವುದಕ್ಕೆ ತುಂಬಾ ಚೆನ್ನಾಗಿದೆ. ಅದು ಕೇವಲ ಭಾಷಣವಾಗಿ ಉಳಿದ್ರೆ ಮಕ್ಕಳ ಶಾಪ ನಿಮಗೆ ತಟ್ಟದಿರದು ಅನ್ನುವುದು ಮಾತ್ರ ನೆನಪಿದ್ರೆ ಸಾಕು.

Discussion about this post