ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಕಾಮಲೀಲೆಯ ಸಿಡಿ ಪ್ರಕರಣವನ್ನು ಎಸ್ಐಟಿ ತನಿಖೆ ವಹಿಸಿ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಹಿರಿಯ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ SIT ರಚನೆಯಾಗಲಿದ್ದು. ಪೂರ್ತಿ ಸಿಡಿ ಪ್ರಕರಣದ ತನಿಖೆ ನಡೆಸಲಿದೆ.
SIT ತನಿಖೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಕುರಿತಂತೆ ಕಾಲಮಿತಿಯನ್ನು ನಿಗದಿಗೊಳಿಸಲಾಗಿದೆಯೇ ಅನ್ನುವ ಪ್ರಶ್ನೆಗೆ ಉತ್ತರಿಸಲು ಗೃಹ ಸಚಿವರು ನಿರಾಕರಿಸಿದ್ದಾರೆ.
ನೀವೆಷ್ಟು ಸಿಡಿ ಮಾಡಿದ್ದೀರಿ? ನಿಮ್ಮದೆಷ್ಟು ಸಿಡಿ ಇದೆ?…. ಇಕ್ಕಟ್ಟಿಗೆ ಸಿಲುಕಿದ ಸಚಿವ ಸೋಮಶೇಖರ್
SIT ರಚನೆಯಿಂದ ಹಲವಾರು ಮಂದಿಗೆ ಇದೀಗ ಸಂಕಷ್ಟ ಬರೋ ಸಾಧ್ಯತೆಗಳಿದೆ. ದಿನೇಶ್ ಕಲ್ಲಹಳ್ಳಿ ಹಾಗೂ ಜಾರಕಿಹೊಳಿ ಸಹೋದರರು ಉಲ್ಲೇಖಿಸಿರುವ 2+3+4 ಮಂದಿಗೂ ಮುಂದಿನ ದಿನಗಳು ಸವಾಲು ಅನ್ನಿಸಿಕೊಳ್ಳುವ ಸಾಧ್ಯತೆಗಳಿದೆ.
ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದ ನಟ ಮೋಹನ್ ಲಾಲ್
ಈ ಹಿಂದೆ ಕಾಮಲೀಲೆಯ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೆಲವರು ಆಗ್ರಹಿಸಿದ್ದರು. ಮತ್ತೆ ಕೆಲವರು ಸಿಐಡಿ ತನಿಖೆಗೆ ಒತ್ತಾಯಿಸಿದ್ದಾರೆ.
ಇದೀಗ ತನಿಖೆ ಕುರಿತಂತೆ ಇದ್ದ ಎಲ್ಲಾ ತಾಂತ್ರಿಕ ತೊಡಕುಗಳನ್ನು ಪರಿಶೀಲನೆ ನಡೆಸಿದ ಬಳಿಕ SIT ರಚನೆಗೆ ನಿರ್ಧರಿಸಲಾಗಿದೆ.
Discussion about this post