ಚಿಕ್ಕೋಡಿ : ಹಾವು ಕಚ್ಚಿ ತಂದೆ ಮತ್ತು ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಲ್ಲಿಕಾರ್ಜುನ್ ಮುತ್ತಪ್ಪ ಕುಂಬಾರ (14) ಹಾಗೂ ಮುತ್ತಪ್ಪ ಬಾಳಪ್ಪ ಕುಂಬಾರ (40) ಎಂದು ಗುರುತಿಸಲಾಗಿದೆ.
ಆಗಸ್ಟ್ 29ರಂದು ನಸುಕಿನ ಜಾವ ಹೊಲಕ್ಕೆ ನೀರು ಹಾಯಿಸಲೆಂದು ತಂದೆ ಮಗ ಇಬ್ಬರೂ ಹೋಗಿದ್ದಾರೆ. ಈ ವೇಳೆ ಇಬ್ಬರಿಗೂ ಹಾವು ಕಚ್ಚಿದೆ. ಕತ್ತಲಾಗಿದ್ದ ಕಾರಣ ಇರುವೆ ಕಡಿದಿರಬಹುದು ಎಂದು ಭಾವಿಸಿದ್ದಾರೆ. ಆದರೆ ಮುಂಜಾನೆ ಹೊತ್ತಿಗೆ ಇಬ್ಬರೂ ತೀವ್ರ ಅಸ್ವಸ್ಥರಾಗಿದ್ದಾರೆ. ತಕ್ಷಣ ಇಬ್ಬರನ್ನೂ ಅಥಣಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 31 ರಂದು ಮಲ್ಲಿಕಾರ್ಜುನ್ ಮುತ್ತಪ್ಪ ಕುಂಬಾರ ಮೃತಪಟ್ಟಿದ್ದಾರೆ. ಸಪ್ಟೆಂಬರ್ 2 ರಂದು ಮುತ್ತಪ್ಪ ಬಾಳಪ್ಪ ಕುಂಬಾರ ಮೃತಪಟ್ಟಿದ್ದಾನೆ ಈ ಸಂಬಂಧ ಐಗಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post