ವೈದ್ಯರ ಸಲಹೆಯಂತೆ ಸೋನಿಯಾ ಗಾಂಧಿ Sonia Gandhi ಸ್ವಚ್ಛ ಗಾಳಿಯ ಸಲುವಾಗಿ ಶಿಫ್ಟ್ ಆಗಿದ್ದಾರೆ
ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ಕಳಪೆಯಾಗುತ್ತಿರುವ ಹಿನ್ನಲೆಯಲ್ಲಿ ವೈದ್ಯರ ಸಲಹೆಯಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ Sonia Gandhi ಜೈಪುರಕ್ಕೆ ಶಿಫ್ಟ್ ಆಗಿದ್ದಾರೆ. ರಾಜಸ್ಥಾನ ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ಈ ಬೆಳವಣಿಗೆ ನಡೆದಿರುವುದು ಹಲವು ಅನುಮಾಗಳಿಗೂ ಕಾರಣವಾಗಿದೆ.
ಇದನ್ನೂ ಓದಿ : ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ
ಈ ಬಗ್ಗೆ ಕಾಂಗ್ರೆಸ್ ಬಳಗವೇ ಸ್ಪಷ್ಟನೆ ಕೊಟ್ಟಿದ್ದು, ಈ ಬಾರಿ ವಿಧಾನಸಭಾ ಚುನಾವಣೆಯ ಯಾವುದೇ ಎಲೆಕ್ಷನ್ ಕಾರ್ಯಕ್ರಮಗಳಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳುತ್ತಿಲ್ಲ. ವಾಯುಮಾಲಿನ್ಯದಿಂದ ಉಂಟಾಗುತ್ತಿರುವ ವಿಷ ಗಾಳಿಯಿಂದ ತಪ್ಪಿಸಿಕೊಳ್ಳಲು ಸೋನಿಯಾ ಗಾಂಧಿ ಕೆಲ ದಿನಗಳ ಕಾಲ ಜೈಪುರದಲ್ಲಿ ತಂಗಲಿದ್ದಾರೆ ಅನ್ನಲಾಗಿದೆ.
ಮಾಹಿತಿಗಳ ಪ್ರಕಾರ ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕಳಪೆಯಾಗಿದ್ದು, ವೈದ್ಯರು ಕೂಡಾ ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿತಿಗೆ ಈ ವಾಯು ಪೂರಕವಾಗಿಲ್ಲ ಎಂದು ಹೇಳಿದ್ದಾರಂತೆ. ಹೀಗಾಗಿ ಅಪಾಯಕಾರಿ ವಾತಾವರಣದಿಂದ ತಪ್ಪಿಸಿಕೊಳ್ಳಲು ಈ ನಿರ್ಧಾರಕ್ಕೆ ಬರಲಾಗಿದೆ.
2020ರಲ್ಲಿ ಹೀಗೆ ದೆಹಲಿಯಲ್ಲಿ ವಾಯುವಿನ ಗುಣಮಟ್ಟ ಕುಸಿದಾಗ ಸೋನಿಯಾ ಗಾಂಧಿ ಗೋವಾಗೆ ಸ್ಥಳಾಂತರಗೊಂಡಿದ್ದರು.
Discussion about this post