ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಶ್ವಾಸಕೋಶದ ಸೋಂಕು ಉಲ್ಬಣಗೊಂಡು ಚೆನೈನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ದಕ್ಷಿಣ ಭಾರತದ ಬಹುಭಾಷಾ ನಟಿ ಮೀನಾ (Meena) ಅವರ ಪತಿ ವಿದ್ಯಾಸಾಗರ್ (Vidyasagar) ಗಂಭೀರ ಶ್ವಾಸಕೋಶದ ಸೋಂಕಿನಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು.
ವಿದ್ಯಾಸಾಗರ್ ಕಳೆದ ಕೆಲ ವರ್ಷಗಳಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಜನವರಿಯಲ್ಲಿ ಮೀನಾ ಅವರ ಇಡೀ ಕುಟುಂಬ ಕೊರೋನಾ ಸೋಂಕಿಗೆ ತುತ್ತಾಗಿತ್ತು. ಈ ವೇಳೆ ವಿದ್ಯಾಸಾಗರ್ ಕೂಡಾ ಕೊರೋನಾ ಗೆದ್ದು ಬಂದಿದ್ದರು. ಆದರೆ ಶ್ವಾಸಕೋಶದ ಸೋಂಕಿನ ಕಾರಣದಿಂದ ಅವರ ಆರೋಗ್ಯದಲ್ಲಿ ಒಂದಿಷ್ಟು ಏರುಪೇರಾಗಿತ್ತು.
ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಟಿಸಿರೋ ಮೀನಾ ಅವರು ಬೆಂಗಳೂರು ಮೂಲದ ವಿದ್ಯಾ ಸಾಗರ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ನೈನಿಕಾ ಎಂಬ ಮಗಳಿದ್ದಾಳೆ. ವಿದ್ಯಾ ಸಾಗರ್ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮದುವೆ ಬಳಿಕ ವಿದ್ಯಾ ಸಾಗರ್ ಮತ್ತು ಮೀನಾ ಚೆನ್ನೈನಲ್ಲಿ ನೆಲೆಸಿದ್ದರು.
Discussion about this post