ಬೆಂಗಳೂರು : ಕೊನೆಗೂ SSLC ಪರೀಕ್ಷಾ ಫಲಿತಾಂಶ ಪ್ರಕಟಣೆಗೆ ದಿನ ನಿಗದಿಯಾಗಿದೆ. ಹೊಸದಾಗಿ ಶಿಕ್ಷಣ ಇಲಾಖೆಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ.
ಈಗಾಗಲೇ ಫಲಿತಾಂಶ ಸಿದ್ದವಾಗಿದ್ದು, ಶುಕ್ರವಾರ ಅಥವಾ ಶನಿವಾರ ಪ್ರಕಟಿಸಲು ಅಧಿಕಾರಿಗಳು ಸಿದ್ದವಾಗಿದ್ದರು. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆಗೂ ಚರ್ಚೆ ನಡೆಸಲಾಗಿತ್ತು. ಹೊಸ ಶಿಕ್ಷಣ ಮಂತ್ರಿಗಳೇ ಫಲಿತಾಂಶ ಪ್ರಕಟಿಸಲಿ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ ಹಿನ್ನಲೆಯಲ್ಲಿ ಅಧಿಕಾರಿಗಳು ಹೊಸ ಮಂತ್ರಿಗಾಗಿ ಕಾದು ಕುಳಿತಿದ್ದರು.
ಇದೀಗ ಬಿ.ಸಿ.ನಾಗೇಶ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದು, ಸೋಮವಾರ ಮಧ್ಯಾಹ್ನ 3.30ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಘೋಷಿಸಿದ್ದಾರೆ.
Discussion about this post