ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಭಾಗಿಯಾಗಿ ಮನೆಗೆ ತೆರಳುತ್ತಿದ್ದ ಕಾರ್ಯಕರ್ತರ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆದಿದೆ.
ಮಂಗಳೂರು ಹೊರವಲಯದ ಕುತ್ತಾರು ಸಮೀಪದ ಮದನಿ ನಗರದಲ್ಲಿ ಈ ಘಟನೆ ನಡೆದಿದ್ದು, ಎರಡು ಬಸ್ ಗಳಿಗೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ಜೊತೆಗೆ ಬಸ್ಸಿನೊಳಗಡೆ ನುಗ್ಗಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ಇದರಿಂದ ಬಸ್ಸಿನಲ್ಲಿದ್ದ ನಾಲ್ಕು ಮಂದಿ ಕಾರ್ಯಕರ್ತರಿಗೆ ಗಾಯವಾಗಿದೆ.
ಘಟನೆಯ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಕೊಣಾಜೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು, ಆರೋಪಿಗಳ ಬಂಧನವಾಗದ ಹೊರತು ಜಾಗ ಬಿಟ್ಟು ಕದಲುವುದಿಲ್ಲ ಎಂದು ಕೂತಿದ್ದಾರೆ.
ಕೊಣಾಜೆ ಪೊಲೀಸ್ ಠಾಣೆಗೆ ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ದೌಡಾಯಿಸಿದ್ದು, ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ.
ಕಾನೂನು ಸುವ್ಯವಸ್ಥೆ ವೈಫಲ್ಯ ಇದಾಗಿದ್ದು, ಸಂಪೂರ್ಣ ಹೊಣೆಯನ್ನು ರಾಜ್ಯ ಸರ್ಕಾರ ವಹಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.
Discussion about this post