ಮಂಗಳೂರು : ಕರಾವಳಿಯ ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಹೆಚ್ಚಾಗಿರುವುದು ಜಿಲ್ಲಾಡಳಿತದ ನಿದ್ದೆಗೆಡಿಸಿದೆ. ಒಂದು ವೇಳೆ ಕೊರೋನಾ ಸೋಂಕು ಏರ ತೊಡಗಿದ್ರೆ ಕೇಂದ್ರ ಸರ್ಕಾರ ನೇರವಾಗಿ ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತದೆ.
ಕೊರೋನಾ ನಿಯಂತ್ರಣ ಸಲುವಾಗಿ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಮೌಲ್ಯಮಾಪನ ಕೂಡಾ ನಡೆಸಲಾಗುತ್ತದೆ. ಈ ವೇಳೆ ಲೋಪ ಕಂಡು ಬಂದರೆ ಜಿಲ್ಲಾಧಿಕಾರಿಗಳ ಭಡ್ತಿ ಸೇರಿದಂತೆ ಇತರ ಸೌಲಭ್ಯಗಳ ಮೇಲೆ ಪರಿಣಾಮ ಬೀಳುತ್ತದೆ.
ಈ ಕಾರಣದಿಂದ ಕೊರೋನಾ ಸೋಂಕು ನಿಯಂತ್ರಿಸಲು ಜಿಲ್ಲಾಧಿಕಾರಿಗಳೇ ಬೀದಿಗಿಳಿದಿದ್ದಾರೆ.
ಈ ನಡುವೆ ಕೊರೋನಾ ಸೋಂಕು ನಿಯಂತ್ರಿಸುವ ಸಲುವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.
ಇದರ ಅಂಗವಾಗಿ ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ ಜಾಗೃತಿ ಅಭಿಯಾನ ನಡೆಯಿತು.
ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದಿರುವ ಹಿನ್ನಲೆಯಲ್ಲಿ ಈ ಜಾಗೃತಿ ಕಾರ್ಯಕ್ರಮ ನಡೆದಿದೆ.
ಈ ವೇಳೆ ಮಾಸ್ಕ್ ಧರಿಸದೇ ಇದ್ದವರಿಗೆ ಮಾಸ್ಕ್ ನೀಡಿ, ಮುಂದೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ನೀಡಲಾಯ್ತು,
ಇದರೊಂದಿಗೆ ಕರಾವಳಿಯಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಏರುತ್ತಿರುವ ಹಿನ್ನಲೆಯಲ್ಲಿ ಬಸ್ ಚಾಲಕ ನಿರ್ವಾಹಕರು, ಆಟೋ ಚಾಲಕರು ಮಾಸ್ಕ್ ಧರಿಸದೇ ಇದ್ರೆ ಮೊದಲ ಬಾರಿಗೆ ದಂಡ ಹಾಗೂ ಎರಡನೇ ಬಾರಿಗೆ ಲೈಸೆನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.
ಅಂಗಡಿಗಳಲ್ಲಿ ಸಿಬ್ಬಂದಿಗಳು ಮಾಸ್ಕ್ ಧರಿಸದೇ ಇದ್ರೆ ಅಂಗಡಿ ಮಾಲೀಕರ ಲೈಸೆನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಕ್ರಿಮಿನಲ್ ನಂತೆ ಟ್ರೀಟ್ ಮಾಡಿರುವುದರ ವಿರುದ್ಧ ಜಿಲ್ಲೆಯಲ್ಲಿ ಅಕ್ರೋಶ ಮುಂದುವರಿದಿದೆ.
Discussion about this post