ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಭಾನುವಾರ ಬೆಳಗ್ಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಅಧಿಕಾರ ಹಾಗೂ ಗೌಪತ್ಯೆಯ ಪ್ರಮಾಣವಚನ ಬೋಧಿಸಿದರು. ಈ ವೇಳೆ ನೂತನ ರಾಜ್ಯಪಾಲರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ನಿರ್ಗಮಿತ ರಾಜ್ಯಪಾಲ ವಜುಭಾಯಿವಾಲಾ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿ ಹಲವಾರು ಮಂದಿ ಪಾಲ್ಗೊಂಡಿದ್ದರು.
ನಿನ್ನೆ ಬೆಂಗಳೂರಿಗೆ ಆಗಮಿಸಿದ ರಾಜ್ಯಪಾಲರು ರಾಜ್ಯಸರ್ಕಾರದಿಂದ ಗೌರವಯುತವಾಗಿ ಬರಮಾಡಿಕೊಳ್ಳಲಾಗಿತ್ತು.
ರಾಜ್ಯಪಾಲ ವಜುಭಾಯಿ ವಾಲಾ ಅವರ ಅವಧಿ ಮುಗಿದು 2 ವರ್ಷಗಳಾಗಿದ್ದವು. ರಾಜ್ಯಪಾಲರಾಗಿದ್ದ ವಜುಭಾಯಿ ವಾಲಾ 6 ವರ್ಷ 10 ತಿಂಗಳುಗಳ ಕಾಲ ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.
![thawar chand gehlot wala](https://torrentspree.com/wp-content/uploads/2021/07/thawar-chand-gehlot-wala.jpg)
Discussion about this post