ಕಾಬೂಲ್ : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ತಾಲೀಬಾನ್ ಉಗ್ರರು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಅಫ್ಘಾನಿಸ್ತಾನ ಮರುಸ್ಥಾಪಿಸಲು ಮುಂದಡಿ ಇಟ್ಟಿದ್ದಾರೆ.
ಈ ನಡುವೆ ಆಫ್ಘಾನಿಸ್ತಾನದಲ್ಲಿ ನೆಲೆಸಿರುವ ವಿದೇಶಿ ಜನರ ಮೇಲೆ ಗುಂಡಿನ ದಾಳಿ ಪ್ರಾರಂಭವಾಗಿದ್ದು, ಆಫ್ಘನ್ನಿಂದ ಎಲ್ಲ ವಾಣಿಜ್ಯ ವಿಮಾನಗಳ ಹಾರಾಟ ರದ್ದಾಗಿದೆ.
ಈ ನಡುವೆ ಅಫ್ಘನ್ನಲ್ಲಿ ನೆಲೆಸಿದ್ದ ವಿದೇಶಿಯರು ವಿಮಾನಗಳ ಮೂಲಕ ತಮ್ಮ ದೇಶಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದು, ಆಫ್ಘನ್ನಿಂದ ಎಲ್ಲಾ ವಾಣಿಜ್ಯ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಹಾರಾಡಲು ಸಿದ್ದವಾದ ವಿಮಾನಗಳಿಗೆ ಜನ ಲೋಕಲ್ ರೈಲುಗಳಿಗೆ ಹತ್ತಿದ್ದಂತೆ ಏರಿದ್ದಾರೆ. ಹೀಗಾಗಿ ಕಾಬೂಲ್ ಏರ್ಪೋರ್ಟ್ ಬಳಿ ಗೊಂದಲ ಏರ್ಪಟ್ಟಿದ್ದು, ಅಫ್ಘಾನಿಸ್ತಾನದ ಕಾಬೂಲ್ ಏರ್ಪೋರ್ಟ್ ಬಳಿ ತಾಲೀಬಾನಿಗಳು ಫೈರಿಂಗ್ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಐವರು ಮೃತಪಟ್ಟಿದ್ದಾರೆ.
ಇನ್ನು ಲಕ್ಷಾಂತರ ಅಫ್ಘನ್ನರು ತಮ್ಮ ತಾಯ್ನಾಡನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಲು ಗಡಿ ಭಾಗಗಳತ್ತ ದೌಡಾಯಿಸುತ್ತಿದ್ದಾರೆ. ಅಫ್ಘಾನಿಸ್ತಾನ ಈಗ ಸಂಪೂರ್ಣವಾಗಿ ತಾಲಿಬಾನಿಗಳ ವಶವಾಗಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜನ ತಮ್ಮ ಪ್ರಾಣ ರಕ್ಷಿಸಿಕೊಳ್ಳಲು ಅಕ್ಷರಶಃ ದಿಕ್ಕಾಪಾಲಾಗಿ ಓಡುತ್ತಿದ್ದಾರೆ.
ಇದೀಗ ಆಫ್ಘನ್ ರಾಜಧಾನಿ ಕಾಬೂಲ್ ತಾಲಿಬಾನ್ ವಶವಾಗಿರುವ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಿಂದ ತೆರಳಲು ಬಯಸುವವರಿಗೆ ಅವಕಾಶ ಮಾಡಿಕೊಡಬೇಕು ಎಂದು ತಾಲಿಬಾನ್ ಸಂಘಟನೆಗೆ 60 ದೇಶಗಳಿಂದ ಮನವಿ ಮಾಡಿಕೊಳ್ಳಲಾಗಿದೆ.
Discussion about this post