ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ
ಯಾವುದೇ ಶಿಕ್ಷಣ ಸಂಸ್ಥೆಯ ಮೂಲಾಧಾರಗಳೆಂದರೆ ಶಿಕ್ಷಕರು. ಯುವ ಮನಸ್ಸುಗಳನ್ನು ರೂಪಿಸುವುದು, ಸಂಸ್ಕಾರ, ಸಂಸ್ಕೃತಿ, ಮಾನವೀಯತೆಯ ಪಾಠವನ್ನು ಹೇಳಿಕೊಟ್ಟು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ರೂವಾರಿಗಳೇ ಶಿಕ್ಷಕರು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವೈದ್ಯಕೀಯ ಶಿಕ್ಷಣದಲ್ಲಿ ಶಿಕ್ಷಕರನ್ನು ಗುರುತಿಸುವುದು ಮತ್ತು ಪ್ರಶಸ್ತಿ ನೀಡುವುದು ಅತ್ಯಗತ್ಯವಾಗಿದೆ.
ಶ್ರೇಷ್ಠತೆ ಮತ್ತು ಆರೋಗ್ಯ ವ್ಯವಸ್ಥೆಯ ನಿರಂತರ ಬೆಳವಣಿಗೆಯನ್ನು ಖಾತ್ರಿಪಡಿಸುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದು ಅಭಿಪ್ರಾಯಪಟ್ಟರು.