ಅತಿವೃಷ್ಟಿ- ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಂಪುಟ ವಿಸ್ತರಣೆಯದ್ದೇ ಎಂಬುದಾಗಿ ಶನಿವಾರ ತಮ್ಮ ಟ್ವೀಟ್ ಖಾತೆ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಟಾಂಗ್ ನೀಡಿದ್ದಾರೆ.
https://www.youtube.com/watch?v=AxWJx-yFhN4
ವಿಶ್ವಾಸ ಮತ ಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳುಹಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ತೋರಿಸಿದ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ ಎಂದು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು @BSYBJP ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ?@INCKarnataka 1/3
ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ,ಕೃಷಿ,ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಂಪುಟ ವಿಸ್ತರಣೆಯದ್ದೇ?@INCKarnataka 2/3
ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ?@INCKarnataka 3/3
Discussion about this post