ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್ ಎಲ್ 4 ವಿಭಾಗದಲ್ಲಿ ಕನ್ನಡಿಗ ಸುಹಾಸ್ ಎಲ್ ಯತಿರಾಜು ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.
ಈ ಮೂಲಕ ಭಾರತ ಇಲ್ಲಿಯವರೆಗೆ ಪ್ಯಾರಾಲಿಂಪಿಕ್ಸ್ ನಲ್ಲಿ 18 ಪದಕಗಳನ್ನು ಗೆದ್ದುಕೊಂಡಂತಾಗಿದೆ.
ಯತಿರಾಜು ಅವರು ಮೂಲತ ಕನ್ನಡಿಗರಾಗಿದ್ದು. ಕರ್ನಾಟಕ ಮೂಲದ ಐಎಎಸ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಸುಹಾಸ್ ಯತಿರಾಜು ಅವರು ನೋಯ್ಡಾದ ಜಿಲ್ಲಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸುಹಾಸ್ ಕರ್ನಾಟಕದ ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾಸನದಲ್ಲಿ ಬಾಲ್ಯ ಹಾಗೂ ಶಿಕ್ಷಣ ಪೂರೈಸಿದ್ದರು. ಮಂಗಳೂರಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಪದವಿ ಗಳಿಸಿದ್ದಾರೆ. ತಂದೆ ಸರ್ಕಾರಿ ಉದ್ಯೋಗಿಯಾದ ಕಾರಣ ಅವರು ದೆಹಲಿಗೆ ಸ್ಥಳಾಂತರಗೊಂಡಿದ್ದರು.
ಈ ಹಿಂದೆ ಪ್ರಯಾಗ್ ರಾಜ್, ಆಗ್ರಾ, ಅಝಮ್ ಗಢ, ಜೌನ್ ಪುರ್, ಸೋನ್ ಭದ್ರಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಇನ್ನು ಸುಹಾಸ್ ಸಾಧನೆಗೆ ಸಿಎಂ ಬೊಮ್ಮಾಯಿ ರಾಷ್ಟ್ರಪತಿ, ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ದೇಶದ ಮೂಲೆ ಮೂಲೆಗಳಿಂದ ಶುಭಾಶಯಗಳು ಹರಿದುಬರುತ್ತಿವೆ.
Discussion about this post