ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಐತಿಹಾಸಿಕ ಸಾಧನೆ ಮೆರೆದಿದ್ದು. ಶೂಟಿಂಗ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದಿದೆ. ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಭಾರತದ ಮನೀಶ್ ನರ್ವಾಲ್ ಚಿನ್ನದ ಪದಕ ಬಾಚಿದರೆ, ಸಿಂಗರಾಜ್ 2ನೇ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ.
218.2 ಅಂಕಗಳನ್ನು ಗಳಿಸಿ ಮನೀಶ್ ನರ್ವಾಲ್ ಮೊದಲ ಸ್ಥಾನ ಪಡೆದಿದ್ದು, ಇದೇ ಪಂದ್ಯದಲ್ಲಿ ಭಾರತದ ಮತ್ತೋರ್ವ ಶೂಟರ್ ಅಧನ ಸಿಂಗರಾಜ್ 216.7 ಅಂಕಗಳೊಂದಿಗೆ 2ನೇ ಸ್ಥಾನ ಪಡೆದರು. ಈ ಮೂಲಕ ಒಂದೇ ಪೈನಲ್ ಪಂದ್ಯದಲ್ಲಿ ಉಭಯ ಆಟಗಾರರು ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದಿದ್ದಾರೆ.
ಈ ಮೂಲಕ ಭಾರತದ ಪದಕದ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಚಿನ್ನ 3, ಬೆಳ್ಳಿ 7 ಮತ್ತು 5 ಕಂಚಿನ ಪದಕಗಳು ಸೇರಿವೆ.
Discussion about this post