ಬೆಂಗಳೂರು : ಈ ವರ್ಷದ SSLC ಫಲಿತಾಂಶ ಸಿದ್ಧವಾಗಿದ್ದು, ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಒಪ್ಪಿಗೆ ಸಿಕ್ಕ ತಕ್ಷಣ ಫಲಿತಾಂಶ ಪ್ರಕಟಿಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.
ಈ ನಡುವೆ ಎಸ್ಎಸ್ಎಲ್ ಸಿ ಫಲಿತಾಂಶ ನಾಳೆಯೇ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರ ಬಿದ್ದಿಲ್ಲ. ಈ ನಡುವೆ ನಿನ್ನೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಭೆ ನಡೆಸಿದ್ದು, ಫಲಿತಾಂಶ ಪ್ರಕಟಣೆ ಕುರಿತಾಗಿ ಚರ್ಚಿಸಲಾಗಿದೆ.
ಇದೀಗ ಸಭೆಯ ವಿವರಗಳು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕಚೇರಿಗೆ ರವಾನೆಯಾಗಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ಭಳಿಕ ಅಂತಿಮ ತೀರ್ಮಾನ ತಿಳಿಸುವುದಾಗಿ ಅವರು ಹೇಳಿದ್ದಾರೆ.
ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸುರೇಶ್ ಕುಮಾರ್ ಸಾಕಷ್ಟು ಶ್ರಮಿಸಿದ್ದರು. ಆದರೆ ಫಲಿತಾಂಶ ಮಾತ್ರ ಅವರ ಅನುಪಸ್ಥಿತಿಯಲ್ಲಿ ಪ್ರಕಟವಾಗಲಿದೆ.
Discussion about this post