ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ.
ನವೆಂಬರ್ 11 ರಂದು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದ್ದು, ಹೀಗಾಗಿ ಭಾರತೀಯ ಹವಾಮಾನ ಇಲಾಖೆ ಯಲ್ಲೋ ಆಲರ್ಟ್ ಘೋಷಿಸಿದೆ.
ಇದರೊಂದಿಗೆ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಮತ್ತು ಕೊಡಗು ಜಿಲ್ಲೆಗಳಿಗೆ ನವೆಂಬರ್ 12 ರಂದು ಯಲ್ಲೋ ಆಲರ್ಟ್ ನೀಡಲಾಗಿದೆ.
ಇನ್ನು ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಬಹುದಾಗಿದ್ದು, ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.
Discussion about this post