ತುಮಕೂರು : ತುಮಕೂರಿನ ಸಿದ್ಧಗಂಗೆಯ ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾಗಿ ಮೂರು ವರ್ಷ ಸಂದಿದೆ. ಇಂದು ಅವರ 114ನೇ ವರ್ಷದ ಹುಟ್ಟುಹಬ್ಬ. ಈಗಾಗಲೇ ಶ್ರೀಗಳ ಹುಟ್ಟುಹಬ್ಬವನ್ನು ದಾಸೋಹ ದಿನವನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಈ ಹಿನ್ನಲೆಯಲ್ಲಿ ಇಂದು ದಾಸೋಹ ದಿನ ಆಚರಿಸಲಾಗುತ್ತಿದೆ.
ಕೊರೋನಾ ಮೂರನೇ ಅಲೆಯ ಹಿನ್ನಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಹುಟ್ಟುಹಬ್ಬವನ್ನು ಸರಳ ಆಚರಣೆಯನ್ನು ಮಾಡಲಾಗುತ್ತದೆ. ಹುಟ್ಟು ಹಬ್ಬದ ಅಂಗವಾಗಿ ಸಿದ್ದಗಂಗ ಮಠದ ಸಿದ್ದಲಿಂಗ ಸ್ವಾಮೀಜಿ ಯವರು ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಠದ ದೇವರಾದ ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ರುದ್ರಾಭಿಷೇಕ ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಪಾಲ್ಗೊಂಡಿದ್ದಾರೆ.
ಈ ನಡುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಠದ ಅಂಗಳಕ್ಕೆ ಸಿಎಂ ಆಗಮಿಸುತ್ತಿದ್ದಂತೆ ಪೊಲೀಸ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಮಠದ ಅಂಗಳದಲ್ಲಿ ಸಿಕ್ಕಾಪಟ್ಟೆ ಜನ ಸೇರಿದ್ದರು. ಕೊರೋನಾ ಆತಂಕ ಕಾಲದಲ್ಲಿ ಇಷ್ಟೆಲ್ಲಾ ಜನ ಸೇರಲು ಅವಕಾಶ ಸೇರಿದ್ಯಾಕೆ ಎಂದು ಹಿರಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Discussion about this post