ಉತ್ತರ ಪ್ರದೇಶ : ಮುಂಬರುವ ಚುನಾವಣೆಯಲ್ಲಿ ಹೇಗಾದರೂ ಸರಿ ಬಿಜೆಪಿಯನ್ನು ಸೋಲಿಸಲೇಬೇಕು, ಪ್ರಧಾನಮಂತ್ರಿ ಪಟ್ಟದಲ್ಲಿ ನಮ್ಮವರೊಬ್ಬರು ಕೂರಲೇಬೇಕು ಎಂದು ಕಾಂಗ್ರೆಸ್ ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಹೋರಾಟ ಕೂಡಾ ಪ್ರಾರಂಭವಾಗಿದೆ. ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ವಾದ್ರಾ ಭರ್ಜರಿ ಪ್ರಚಾರದಲ್ಲಿದ್ರೆ, ರಾಹುಲ್ ಗಾಂಧಿ ಟ್ವೀಟರ ನಲ್ಲಿ ಸುದ್ದಿಯಾಗುತ್ತಿದ್ದಾರೆ.
ಈ ನಡುವೆ ನಿಷ್ಠಾವಂತ ನಾಯಕರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ ಎಂದು ಆರೋಪಿಸಿ ಉತ್ತರ ಪ್ರದೇಶದ ಇಬ್ಬರು ಕಾಂಗ್ರೆಸ್ ನಾಯಕರು ಪಕ್ಷದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಶೈಲೇಂದ್ರ ಸಿಂಗ್ ಮತ್ತು ರಾಜೇಶ್ ಸಿಂಗ್ ತಮ್ಮ ರಾಜೀನಾಮೆ ಪತ್ರವನ್ನು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ಕುಮಾಲ್ ಲಲ್ಲು ಅವರಿಗೆ ಸಲ್ಲಿಸಿದ್ದಾರೆ.
ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಇವರಿಬ್ಬರು ನಿಷ್ಠಾವಂತ ಮತ್ತು ಹಿರಿಯ ಕಾಂಗ್ರೆಸ್ ಸದಸ್ಯರನ್ನು ನಿರ್ಲಕ್ಷಿಸಲಾಗುತ್ತಿದೆ. ಹೀಗಾಗಿ ಪಕ್ಷವನ್ನು ತೊರೆಯುತ್ತಿದ್ದೇವೆ. ಪಕ್ಷದ ಸ್ಥಿತಿ ಗತಿಯ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಗೆ ಹಲವು ಬಾರಿ ತಿಳಿಸಿದ್ದೇವೆ. ಆದರೆ ಅವರು ಕ್ರಮ ಕೈಗೊಂಡಿಲ್ಲ. ಹೀಗಾಗಿ ರಾಜೀನಾಮೆ ಕೊಡದೆ ಅನ್ಯ ಮಾರ್ಗವಿಲ್ಲ ಅಂದಿದ್ದಾರೆ.
ಮತ್ತೊಂದು ಕಡೆ ಕೇರಳದ ಪಾಲಕ್ಕಾಡ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ನಲ್ಲಿ ಒಮ್ಮತ ಏರ್ಪಡದ ಕಾರಣ ಕಾಂಗ್ರೆಸ್ನ ಮಾಜಿ ಶಾಸಕ ಎ.ವಿ ಗೋಪಿನಾಥ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಗೋಪಿನಾಥ್ ಪಾಲಕ್ಕಾಡ್ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿದ್ದು ಕೆಪಿಸಿಸಿಯ ಸದಸ್ಯರಾಗಿದ್ದಾರೆ. ಈ ಬಾರಿಯೂ ಗೋಪಿನಾಥ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಮೇಲೆ ಕಣ್ಣಿಟ್ಟಿದ್ದರು. ಆದರೆ ಎ.ತಂಕಪ್ಪ ಅವರಿಗೆ ನೀಡಲಾಗಿದೆ. ಹಾಗಂತ ಗೋಪಿನಾಥ್ ಅವರು ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವುದು ಮೊದಲಲ್ಲ, ಈ ಬಾರಿ ಕೇರಳ ವಿಧಾನಸಭೆಗೆ ನಡೆದ ಚುನಾವಣೆಗೆ ಸ್ಪರ್ಧಿಸಲು ಗೋಪಿನಾಥ್ಗೆ ಟಿಕೆಟ್ ಅನ್ನು ನೀಡಿರಲಿಲ್ಲ. ಇದನ್ನು ವಿರೋಧಿಸಿ ಅವರು ಪ್ರತಿಭಟಿಸಿದ್ದರು.
Shailendra Singh said that loyal and old time Congresspersons have been neglected since Lallu took over and this is why dedicated leaders are quitting the party.
Discussion about this post