ಬೆಂಗಳೂರು : ನೈಸ್ ರಸ್ತೆಯಲ್ಲಿ ಇತ್ತೀಚೆಗೆ ರಾತ್ರಿ ಅಪಘಾತಗಳು ಹೆಚ್ಚುತ್ತಿರುವುದನ್ನು ಗಮನಿಸಿ ಈ ರಸ್ತೆಯಲ್ಲಿ ರಾತ್ರಿ ಹೊತ್ತು ದ್ವಿಚಕ್ರ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಬೆಂಗಳೂರು ಪೊಲೀಸರ ಸೂಚನೆಯನ್ನು ಪಾಲಿಸಿರುವ ನೈಸ್ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿಯಿಂದ ತುಮಕೂರು ರಸ್ತೆಯ ಮಾದಾವರವರೆಗಿನ ನೈಸ್ ರಸ್ತೆಯಲ್ಲಿ ರಾತ್ರಿ ಸಂದರ್ಭ ಅಂದ್ರೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ತನಕ ದ್ವಿಚಕ್ರ ವಾಹನಗಳು ಓಡಾಟ ನಡೆಸುವಂತಿಲ್ಲ. ಜನವರಿ 16 ರಿಂದ ಈ ಆದೇಶ ಜಾರಿಯಲ್ಲಿರುತ್ತದೆ.
ರಾತ್ರಿ ವೇಳೆ ಭಾರೀ ವಾಹನಗಳು ಅತೀ ವೇಗವಾಗಿ ಚಲಿಸುವ ಕಾರಣ ದ್ವಿಚಕ್ರ ವಾಹನ ಸವಾರರ ಪ್ರಾಣಕ್ಕೆ ಸಂಚಕಾರ ತರುತ್ತಿದೆ. ಹೀಗಾಗಿ ಪೊಲೀಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿತ್ತು.
Discussion about this post