ಉಡುಪಿ : ಯುವತಿಗೆ ಚೂರಿಯಿಂದ ಇರಿದು, ಬಳಿಕ ತಾನು ಕತ್ತು ಕೊಯ್ದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಸಂತೆಕಟ್ಟೆ ಸಮೀಪದ ರೋಬೊಸಾಫ್ಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.ಈ ಪೈಕಿ ಗಂಭೀರ ಗಾಯಗೊಂಡ ಯುವತಿ ಮೃತಪಟ್ಟಿದ್ದು, ಯುವಕ ಆಸ್ಪತ್ರೆಯಲ್ಲಿ ಜೀವನ್ಮರಣ ನಡುವೆ ಹೋರಾಡುತ್ತಿದ್ದಾನೆ.
ಮೃತಳನ್ನು ಅಂಬಾಗಿಲು ಸಮೀಪದ ಕಕ್ಕುಂಜೆ ನಿವಾಸಿ ವಿಠಲ ಭಂಡಾರಿ ಹಾಗೂ ಸುಶೀಲಾ ದಂಪತಿಯ ಪುತ್ರಿ ಸೌಮ್ಯಶ್ರೀ(26) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಎಂದು ಗುರುತಿಸಲಾಗಿದೆ.
ಸೌಮ್ಯಶ್ರೀ ಮತ್ತು ಸಂದೇಶ ಕಳೆದ ಹಲವು ಪರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಸೌಮ್ಯಶ್ರೀಗೆ ಬೇರೆಯವರೊಂದಿಗೆ ನಿಶ್ಚಿತಾರ್ಥ ಆಗಿತ್ತು. ಇದರಿಂದ ಕುಪಿತಗೊಂಡಿದ್ದ ಸಂದೇಶ ಕುಲಾಲ್ ಸೌಮ್ಯಶ್ರೀ ಜೊತೆಗೆ ಜಗಳ ಮಾಡಿಕೊಂಡಿದ್ದ ಎನ್ನಲಾಗಿದೆ. ಸೋಮವಾರ ಸಂಜೆ ಸ್ಕೂಟಿಯಲ್ಲಿ ಮನೆಗೆ ವಾಪಾಸ್ಸು ಹೋಗುತ್ತಿದ್ದ ಸೌಮ್ಯಶ್ರೀಯನ್ನು ಬೈಕ್ ನಲ್ಲಿ ಬೆನ್ನಟ್ಟಿದ ಸಂದೇಶ್, ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡ ಹಾಕಿದ್ದಾನೆ. ಈ ವೇಳೆ ಅವರಿಬ್ಬರ ನಡುವೆ ಮತ್ತೆ ವಾಗ್ವಾದ ನಡೆದಿದ್ದು. ಈ ವೇಳೆ ಸಂದೇಶ್, ತಾನು ತಂದಿದ್ದ ಚೂರಿಯಿಂದ ಸೌಮ್ಯಶ್ರೀಗೆ ಇರಿದು ಅದೇ ಚಾಕುವಿನಿಂದ ತನ್ನ ಕುತ್ತಿಗೆ ಕೊಯ್ದುಕೊಂಡಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಇಬ್ಬರೂ ಆಸ್ಪತ್ರೆಗೆ ಸೇರಿಸಿದ್ದಾರೆ.
ಸೌಮ್ಯಶ್ರೀ ಸಂತೆಕಟ್ಟೆಯ ರಾಷ್ಟ್ರೀಕೃತ ಬ್ಯಾಂಕಿನ ಆಧಾರ್ ಕಾರ್ಡ್ ಲಿಂಕ್ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದು, ಸಂದೇಶ್ ಉಡುಪಿಯ ಮೆಡಿಕಲ್ ಒಂದರಲ್ಲಿ ಉದ್ಯೋಗಿಯಾಗಿದ್ದಾನೆ.
In the incident where a man stabbed woman in broad daylight here on Monday August 30, the woman was declared brought dead at the hospital. According to sources, the man waylaid the woman and stabbed her in the stomach with a knife. He then slit his own throat.
Discussion about this post