ಟೋಲ್ ಕಂಬಕ್ಕೆ ಅಂಬುಲೆನ್ಸ್ ಢಿಕ್ಕಿ ( udupi ambulance ) ಹೊಡೆದ ಪ್ರಕರಣದಲ್ಲಿ ಸಾವಿನ ಸಂಖ್ಯೆ 4ಕ್ಕೆ ತಲುಪಿದೆ. ಅಂಬುಲೆನ್ಸ್ ನಲ್ಲಿದ್ದ ರೋಗಿಯ ಸಂಬಂಧಿಯೂ ಮೃತಪಟ್ಟಿದ್ದಾರೆ ಅನ್ನುವ ಸುದ್ದಿ ಬಂದಿದೆ
ಉಡುಪಿ : ಶಿರೂರು ಟೋಲ್ ನಲ್ಲಿ ನಡೆದ ಭೀಕರ ಅಂಬುಲೆನ್ಸ್ ( udupi ambulance ) ಅಪಘಾತ ಪ್ರಕರಣದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಯೊಬ್ಬರನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಅಂಬುಲೆನ್ಸ್ ಚಾಲಕನ ಅತೀವೇಗ ಮತ್ತು ಅಜಾಗರೂಕತೆಯೇ ಕಾರಣ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಸ್ಥಳದಲ್ಲೇ ರೋಗಿ, ರೋಗಿಯ ಪತ್ನಿ ಮತ್ತು ಒಬ್ಬರು ಸಂಬಂಧಿಕರು ಮೃತಪಟ್ಟಿದ್ದರು. ಮತ್ತೊಬ್ಬರು ಸಂಬಂಧಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡಾ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಟೋಲ್ ಸಿಬ್ಬಂದಿಯ ಪರಿಸ್ಥಿತಿ ಚಿಂತಾಜನಕವಾಗಿದೆ.
ಇಡೀ ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Discussion about this post