ಉಡುಪಿ : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ತೀರ್ಪನ್ನು ವಿಚಾರಣಾ ನ್ಯಾಯಾಲಯ ಮುಂದೂಡಿದೆ.
ಈ ಕುರಿತು ವಿಚಾರಣೆ ಮುಕ್ತಾಯಗೊಳಿಸಿರುವ ಉಡುಪಿ ಜಿಲ್ಲಾ ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಅವರು ಈ ತಿಂಗಳಲ್ಲಿ ತೀರ್ಪು ಪ್ರಕಟಿಸಬೇಕಿತ್ತು. ಇದೀಗ ತೀರ್ಪು ಪ್ರಕಟಣೆಯನ್ನು ಜೂನ್ 8ಕ್ಕೆ ಮುಂದೂಡಲಾಗಿದೆ.
ಜೂನ್ 8 ರಂದು ಜಾಮೀನು ಪಡೆದು ಹೊರಗಿರುವ ಆರೋಪಿ ರಾಜೇಶ್ವರಿ ಶೆಟ್ಟಿ ಹಾಗೂ ಸಾಕ್ಷ್ಯನಾಶದ ಆರೋಪಿ ರಾಘವೇಂದ್ರ ನ್ಯಾಯಾಲಯದಲ್ಲಿ ಹಾಜರಿರಬೇಕು ಹಾಗೂ ಜೈಲಿನಲ್ಲಿರುವ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ನಿರಂಜನ್ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.
Discussion about this post