ಮಲ್ಪೆ ಪೊಲೀಸ್ ಠಾಣೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಕಿಯೊಂದಿಗೆ ಕೆಲಸ ಮಾಡುವ ವೇಳೆ ಅದೆಷ್ಟು ಮುನ್ನೆಚ್ಚರಿಕೆ ವಹಿಸಿದರೂ ಸಾಲದು (Udupi News)
ಉಡುಪಿ : ಬೇಯಲಿಟ್ಟ ಅನ್ನವನ್ನು ಒಲೆಯಿಂದ ಬಸಿಯುವ ವೇಳೆ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ನಿಡಿಯೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಸುಶೀಲ (72 ) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : Jwala gutta : ಪತಿಯ ಬೆತ್ತಲೆ ಫೋಟೋ ಸೆರೆ ಹಿಡಿದ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ
ಜುಲೈ 30 ರಂದು ಸುಶೀಲಾ ಅವರು ತಮ್ಮ ಮನೆಯಲ್ಲಿ ಒಲೆಯಲ್ಲಿ ಇಟ್ಟಿದ್ದ ಅನ್ನವನ್ನು ಬಸಿಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ಈ ವೇಳೆ ಅವರ ಕಾಲು ಹಾಗೂ ಸೊಂಟದ ಹಿಂಭಾಗದಲ್ಲಿ ಸುಟ್ಟ ಗಾಯಗಳಾಗಿತ್ತು.
ಗಾಯಗೊಂಡ ಸುಶೀಲಾ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ( ಆಗಸ್ಟ್ 5 ) ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
Discussion about this post