ನವದೆಹಲಿ : ದೇಶದ ವಿವಿಧ ಭಾಗಗಳಲ್ಲಿ 24 ನಕಲಿ ವಿಶ್ವವಿದ್ಯಾಲಯಗಳಿದ್ದು ಅದರಲ್ಲಿ ಒಂದು ಕರ್ನಾಟಕದಲ್ಲಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾಹಿತಿಯನ್ನು ಕೊಟ್ಟಿದ್ದು, ಲೋಕಸಭೆಯಲ್ಲಿ ಈ ವಿವರಗಳನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಬಹಿರಂಗ ಮಾಡಿದ್ದಾರೆ.
ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು 24 ಸ್ವಯಂ ಘೋಷಿತ ಶಿಕ್ಷಣ ಸಂಸ್ಥೆಗಳನ್ನು ಯುಜಿಸಿ ನಕಲಿ ಎಂದು ಘೋಷಿಸಿದೆ ಹಾಗೂ ನಿಯಮ ಉಲ್ಲಂಘಿಸಿದ ಇನ್ನೂ ಎರಡು ಸಂಸ್ಥೆಗಳನ್ನು ಪತ್ತೆ ಮಾಡಿದೆ ಅಂದಿದ್ದಾರೆ. ಸಚಿವರು ಕೊಟ್ಟ ಪಟ್ಟಿಯಲ್ಲಿ ಕರ್ನಾಟಕದ ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಶನ್ ಸೊಸೈಟಿ ಕೂಡಾ ಸೇರಿದೆ.
ಉತ್ತರ ಪ್ರದೇಶದಲ್ಲಿ ಎಂಟು ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದ್ದು ಈ ಪೈಕಿ ವಾರಣಾಸಿಯ ಸಂಸ್ಕೃತ ವಿಶ್ವವಿದ್ಯಾಲಯ, ಮಹಿಳಾ ಗ್ರಾಮ ವಿದ್ಯಾಪೀಠ, ಅಲಹಾಬಾದ್ ಗಾಂಧಿ ಹಿಂದಿ ವಿದ್ಯಾಪೀಠ, ಅಲಹಾಬಾದ್ ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ, ಕಾನ್ಪುರ ನೇತಾಜಿ ಸುಭಾಷ್ ಚಂದ್ರ ಬೋಸ್ ಮುಕ್ತ ವಿಶ್ವವಿದ್ಯಾಲಯ, ಅಲಿಘರ್ ಉತ್ತರ ಪ್ರದೇಶ ವಿಶ್ವವಿದ್ಯಾಲಯ, ಮಥುರಾ ಮಹಾರಾಣಾ ಪ್ರತಾಪ್ ಶಿಕ್ಷಾ ನಿಕೇತನ ವಿಶ್ವವಿದ್ಯಾಲಯ ಮತ್ತು ಇಂದ್ರಪ್ರಸ್ಥ ಶಿಕ್ಷಾ ಪರಿಷತ್, ನೋಯ್ಡಾ ಸೇರಿದೆ.
ದೆಹಲಿಯಲ್ಲಿ ಏಳು ನಕಲಿ ವಿಶ್ವವಿದ್ಯಾಲಯಗಳಿದ್ದು, ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ಯುನೈಟೆಡ್ ನೇಷನ್ಸ್ ಯೂನಿವರ್ಸಿಟಿ, ವೊಕೇಷನಲ್ ಯೂನಿವರ್ಸಿಟಿ, ಎಡಿಆರ್ ಸೆಂಟ್ರಿಕ್ ಜುರಿಡಿಕಲ್ ವಿಶ್ವವಿದ್ಯಾಲಯ, ಇಂಡಿಯನ್ ಇನ್ ಸ್ಟಿಟ್ಯೂಷನ್ ಆಫ್ ಸೈನ್ಸ್ ಅಂಡ್ ಎಂಜಿನಿಯರಿಂಗ್, ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್ ಎಂಪ್ಲಾಯ್ ಮೆಂಟ್, ಮತ್ತು ಅಧ್ಯಾತ್ಮಿಕ್ ವಿಶ್ವವಿದ್ಯಾಲಯ ನಕಲಿ ವಿವಿ ಪಟ್ಟಿಯಲ್ಲಿದೆ.
ಒಡಿಶಾ ಮತ್ತು ಪಶ್ಚಿಮ ಬಂಗಾಳಗಳಲ್ಲಿ ತಲಾ ಎರಡು ವಿಶ್ವವಿದ್ಯಾಲಯಗಳಿದ್ದು, ಈ ಪೈಕಿ ಕೋಲ್ಕತ್ತಾದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಮತ್ತು ಕೋಲ್ಕತ್ತಾದ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರಿಸರ್ಚ್ ಮತ್ತು ರೂರ್ಕೆಲಾದ ನವಭಾರತ್ ಶಿಕ್ಷಾ ಪರಿಷತ್ ಮತ್ತು ಉತ್ತರ ಒರಿಸ್ಸಾ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯಗಳು ಸೇರಿದೆ.
ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪುದುಚೇರಿ ಮತ್ತು ಮಹಾರಾಷ್ಟ್ರಗಳಲ್ಲಿ ತಲಾ ಒಂದು ನಕಲಿ ವಿಶ್ವವಿದ್ಯಾಲಯವಿದ್ದು, ಪುದುಚೇರಿಯ ಶ್ರೀ ಬೋಧಿ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಕ್ರೈಸ್ಟ್ ಟೆಸ್ಟಮೆಂಟ್ ಡೀಮ್ಡ್ ವಿಶ್ವವಿದ್ಯಾಲಯ, ಆಂಧ್ರಪ್ರದೇಶ ರಾಜಾ ಅರೇಬಿಕ್ ವಿಶ್ವವಿದ್ಯಾಲಯ, ನಾಗ್ಪುರ ಸೇಂಟ್ ಜಾನ್ಸ್ ವಿಶ್ವವಿದ್ಯಾಲಯ, ಮತ್ತು ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಶನ್ ಸೊಸೈಟಿ, ಕರ್ನಾಟಕ ಸೇರಿದೆ.
Discussion about this post