ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಬಾಲಕಿಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅವರು ಕೈಗೊಂಡಿರುವ ಈ ನಿರ್ಧಾರ ಲಕ್ಷಾಂತರ ಹೆಣ್ಣು ಮಕ್ಕಳ ಬದುಕಿನಲ್ಲಿ ಬೆಳಕು ನೀಡಲಿದೆ.
ರೆಡ್ಡಿ ಸರ್ಕಾರದ ನಿರ್ಧಾರದ ಪ್ರಕಾರ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವ ಹೆಣ್ಣು ಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಗಳನ್ನು ಸರ್ಕಾರ ಒದಗಿಸಲಿದೆ. ಇಂದು ಈ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದ್ದು, 7 ರಿಂದ 12ನೇ ತರಗತಿ ತನಕದ ಸುಮಾರು 10 ಲಕ್ಷ ಮಕ್ಕಳಿಗೆ ಅನುಕೂಲ ಸಿಗಲಿದೆ.
ಪ್ರತಿ ತಿಂಗಳು 10 ಸ್ಯಾನಿಟರಿ ಪ್ಯಾಡ್ ಗಳನ್ನು ಸರ್ಕಾರ ನೀಡಲಿದ್ದು, ಈ ಮೂಲಕ ಹದಿಹರೆಯದ ಹುಡುಗಿಯ ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಗಮನಹರಿಸಿದಂತಾಗುತ್ತದೆ. ಜೊತೆಗೆ ಮುಟ್ಟಿನ ಸಂದರ್ಭದಲ್ಲಿ ವಿದ್ಯಾರ್ಥಿನಿಯಕರ ಗೈರು ಹಾಜರಿಯನ್ನು ಕೂಡಾ ಕಡಿಮೆ ಮಾಡಲು ಇದು ಸಹಕಾರಿಯಾಗಲಿದೆ.
ಯೋಜನೆಯ ಪ್ರಕಾರ ಪ್ರತೀ ಎರಡು ತಿಂಗಳಿಗೊಮ್ಮೆ 10 ಸಾವಿರಕ್ಕೂ ಹೆಚ್ಚು ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ನ್ಯಾಪ್ಕಿನ್ ಗಳು ವಿತರಣೆಯಾಗಲಿದೆ.
Under the Swechha initiative, 10 sanitary napkins will be given every month to about 10 lakh adolescent girls studying from 7th-12th grades in all government schools and intermediate colleges in AP.
Discussion about this post