ಡೆಂಘೀ ನಿಯಂತ್ರಣ ಮತ್ತು ತಡೆಗೆ ವಿಶೇಷ ಯೋಜನೆ ರೂಪಿಸುವ ಅಗತ್ಯವಿದೆ : ಜೆ.ಪಿ.ನಡ್ಡಾ
ಡೆಂಘೀ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಸಿದ್ಧತಾ ಕ್ರಮಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ದೆಹಲಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಪರಾಮರ್ಶೆ ಸಭೆ ನಡೆಸಿದರು. ಗ್ರಾಮೀಣಾಭಿವೃದ್ಧಿ, ಶಿಕ್ಷಣ ಇಲಾಖೆ ಸೇರಿದಂತೆ ಅಂತರ-ಇಲಾಖಾ ಕಾರ್ಯಯೋಜನೆಗಳ ಮೂಲಕ ಡೆಂಘೀ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು.
ಸಭೆಯ ಬಳಿಕ ಜೆ.ಪಿ.ನಡ್ಡಾ, ಡೆಂಘೀ ನಿಯಂತ್ರಣ ಮತ್ತು ತಡೆಗೆ ವಿಶೇಷ ಯೋಜನೆ ರೂಪಿಸುವ ಅಗತ್ಯವಿದೆ. ರೋಗ ನಿಯಂತ್ರಣಕ್ಕೆ ರಾಜ್ಯಗಳು ಕೈಗೊಂಡಿರುವ ಸಿದ್ಧತಾ ಕ್ರಮಗಳ ಪರಿಶೀಲನೆ ನಡೆಸಲಾಗಿದ್ದು, ಕಾಲಕಾಲಕ್ಕೆ ಮಾರ್ಗಸೂಚಿ ಪ್ರಕಟಿಸಲಾಗುತ್ತಿದೆ ಎಂದು ತಿಳಿಸಿದರು.
ಕೇಂದ್ರೀಯ ಆಸ್ಪತ್ರೆಗಳಲ್ಲಿ ಡೆಂಘೀ ನಿರ್ವಹಣೆಗೆ ಪ್ರತ್ಯೇಕ ವಾರ್ಡ್ ಸ್ಥಾಪಿಸುವಂತೆ ಸೂಚಿಸಲಾಗಿದೆ. ವೈದ್ಯರು ಮತ್ತು ಅಗತ್ಯ ಸಿಬ್ಬಂದಿ ಲಭ್ಯತೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಸದ್ಯದಲ್ಲೇ ಸಹಾಯವಾಣಿ ಆರಂಭಿಸಲಾಗುವುದು. ಮುಂದಿನ 4ರಿಂದ 5 ದಿನಗಳಲ್ಲಿ ರಾಜ್ಯಗಳಲ್ಲೂ ಸಹಾಯವಾಣಿ ಆರಂಭಿಸಲು ಸೂಚನೆ ನೀಡಲಾಗಿದೆ, ಡೆಂಘೀ ನಿಯಂತ್ರಣಕ್ಕೆ ಸಂಘಟಿತ ಪ್ರಯತ್ನ ಅಗತ್ಯ ಎಂದು ಹೇಳಿದರು.
Discussion about this post