ಈರುಳ್ಳಿ ಬೆಲೆ ನಿಯಂತ್ರಣ ಸಂಬಂಧ ೫೭೦ ಕಡೆಗಳಲ್ಲಿ ನಿಗಾ
ರಾಜ್ಯ ಸರ್ಕಾರ ತುಷ್ಟೀಕರಣದ ರಾಜಕಾರಣದಲ್ಲಿ ನಿರತರಾಗಿದ್ದು, ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಯಲ್ಲಿಂದು ಆರೋಪಿಸಿದ್ದಾರೆ.
ನಾಗಮಂಗಲ, ದಾವಣಗೆರೆ ಸೇರಿದಂತೆ ರಾಜ್ಯದ ಇನ್ನಿತರ ಭಾಗಗಳಲ್ಲಿ ನಡೆದ ಗಣೇಶೋತ್ಸವ ವಿಸರ್ಜನೆ ಗಲಭೆಗೆ ಸಂಬಂಧಿಸಿದಂತೆ ಸರ್ಕಾರ ಒಂದು ಸಮುದಾಯವನ್ನು ಓಲೈಕೆ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ನಿರತರಾಗಿದ್ದು, ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿದರು. ಈರುಳ್ಳಿ ಬೆಲೆ ನಿಯಂತ್ರಣ ಸಂಬಂಧ ೫೭೦ ಕಡೆಗಳಲ್ಲಿ ನಿಗಾ ವಹಿಸಲಾಗಿದೆ ಎಂದು ಅವರು ಇದೇ ವೇಳೆ ಪ್ರಹ್ಲಾದ್ ಜೋಷಿ ತಿಳಿಸಿದರು.