ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳ
ಇಂದಿನಿಂದ ಇದೇ ೨೪ರವರೆಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ “ಕೃಷಿ ಮೇಳ-೨೦೨೪”ರ ಅಂಗವಾಗಿ ಆಯೋಜಿಸಿದ್ದ ಬೀಜ ಮೇಳವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಹವಾಮಾನ ಬದಲಾವಣೆಯ ವಿವಿಧ ಅಂಶಗಳ ಕುರಿತು ರೈತರಿಗೆ ಮಾಹಿತಿ ನೀಡುವುದು ಕೃಷಿ ಮೇಳದ ಉದ್ದೇಶವಾಗಿದೆ ಎಂದು ತಿಳಿಸಿದರು.
‘ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಧಾರವಾಡ ಕೃಷಿ ಮೇಳ ೨೦೨೪ ನಡೆಯಲಿದೆ.
ಕೃಷಿ ಮೇಳದ ಮೂಲಕ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಮೇಳದ ಮುಖ್ಯ ಉದ್ದೇಶವಾಗಿದ್ದು, ಮೇಳದಲ್ಲಿ ಮೊದಲ ಬಾರಿಗೆ ‘ಸ್ಟಾರ್ಟ್ ಅಪ್ ಪೆವಿಲಿಯನ್’ ವ್ಯವಸ್ಥೆಯನ್ನೂ ಮಾಡಲಾಗಿದೆ. ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮಳಿಗೆಗಳನ್ನು ಸಜ್ಜುಗೊಳಿಸಲಾಗಿದ್ದು.
ಬೀಜ ಪೂರೈಕೆ ಸರಪಳಿಯಲ್ಲಿ ಕಂಡುಬರುವ ಅಡೆತಡೆಗಳನ್ನು ನಿಭಾಯಿಸಲು ಬೀಜ ಮೇಳ ಆಯೋಜಿಸಿರುವುದು, ಕೃಷಿಕರಿಗೆ ಸಹಾಯಕಾರಿಯಾಗಿದೆ ಎಂದು ತಿಳಿಸಿದರು.