ಪುತ್ತೂರು : KSRTC ಬಸ್ ಹರಿದು ತಾಯಿ, ಮಗು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡಯ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಶಾಹಿದಾ(25) ಮತ್ತು ಒಂದು ವರ್ಷದ ಪುತ್ರ ಶಾಹೀಲ್ ಎಂದು ಗುರುತಿಸಲಾಗಿದೆ.

ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ತಾಯಿ ಮಗ ಕಾಯುತ್ತಿದ್ರೆ, ಅತಿ ವೇಗದಿಂದ ಬಸ್ ನಿಲ್ದಾಣಕ್ಕೆ ಬಂದ KSRTC ಬಸ್ ನ ಅಡಿಗೆ ತಾಯಿ ಮಗ ಸಿಲುಕಿ ಮೃತಪಟ್ಟಿದ್ದಾರೆ. ನಿನ್ನೆಯ ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ ಮಗನೊಂದಿಗೆ ತೆರಳಲು ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಬಂದಿದ್ದರು.

ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿ ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post