ಮಂಗಳೂರು : ತೆಂಕುತಿಟ್ಟು ಯಕ್ಷಗಾನದ ಭಾಗವತ ಪದ್ಯಾಣ ಗಣಪತಿ ಭಟ್ (66) ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಕೆಲ ತಿಂಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ನ್ಯೂಮೋನಿಯಾಗೆ ತುತ್ತಾಗಿದ್ದ ಅವರನ್ನು ಹೃದಯ ಸಂಬಂಧಿ ಕಾಯಿಲೆ ಕಾಡಿತ್ತು. ಬಳಿಕ ಚೇತರಿಸಿಕೊಂಡಿದ್ದ ಅವರು ಮನೆಗೆ ಮರಳಿದ್ದರು. ಗಣಪತಿ ಭಟ್ಟರು ಪತ್ನಿ ಶೀಲಾಶಂಕರಿ, ಮಕ್ಕಳಾದ ಸ್ವಸ್ತಿಕ್, ಕಾರ್ತಿಕ್ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಪದ್ಯಾಣ ತಿರುಮಲೇಶ್ವರ ಭಟ್ಟ ಮತ್ತು ಸಾವಿತ್ರಿ ದಂಪತಿಯ ಮೂರನೇ ಮಗನಾಗಿ ಜನಿಸಿದ ಗಣಪತಿ ಭಟ್, ಅಜ್ಜ ಪುಟ್ಟು ನಾರಾಯಣ ಭಟ್ಟರಿಂದಲೇ ಭಾಗವತಿಕೆಯ ಪಾಠ ಹೇಳಿಸಿಕೊಂಡಿದ್ದರು.ತಮ್ಮ 16ನೇ ವಯಸ್ಸಿನಲ್ಲಿ ಚೌಡೇಶ್ವರೀ ಮೇಳಕ್ಕೆ ಸಂಗೀತಗಾರರಾಗಿ ಸೇರಿದ್ದ ಅವರು ಬಳಿಕ ಕುಂಡಾವು, ಕಸ್ತೂರಿ ವರದರಾಯ ಪೈ ಅವರ ಸುರತ್ಕಲ್ ಮೇಳ ಸೇರಿ ಸದ್ದು ಮಾಡಿದ್ದರು.
ಇದಾದ ಬಳಿಕ ಕರ್ನಾಟಕ, ಹೊಸನಗರ, ಎಡನೀರು, ಹನುಮಗಿರಿ ಸೇರಿ ಹಲವು ಯಕ್ಷಗಾನ ಮೇಳಗಳಲ್ಲಿ ಭಾಗವತರಾಗಿದ್ದ ಅವರ ನಿಧನಕ್ಕೆ ನಾಡಿನ ಖ್ಯಾತರು ಕಂಬನಿ ಮಿಡಿದಿದ್ದಾರೆ.
ಯಕ್ಷಗಾನ ಕಲಾ ಕ್ಷೇತ್ರದಲ್ಲಿ ತಮ್ಮ ಕಂಚಿನ ಕಂಠದಿಂದ ಜನಮೆಚ್ಚಿದ ಭಾಗವತರಾದ ಶ್ರೀ ಪದ್ಯಾಣ ಗಣಪತಿ ಭಟ್ ರವರ ಅಗಲಿಕೆಯಿಂದ ಸಾಂಸ್ಕೃತಿಕ ರಂಗಕ್ಕೆ ಭರಿಸಲಾರದ ನಷ್ಟವಾಗಿದೆ. ನಾಲ್ಕು ದಶಕಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಶ್ರೀ ಪದ್ಯಾಣ ಗಣಪತಿ ಭಟ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. pic.twitter.com/O7xBme6ass
— Basavaraj S Bommai (@BSBommai) October 12, 2021
ಯಕ್ಷಗಾನ ಭಾಗವತಿಕೆಯ ಗಾನಗಂಧರ್ವ ಎಂದು ಹೆಸರಾಗಿದ್ದ ಹಿರಿಯ ಭಾಗವತರಾದ ಶ್ರೀ ಪದ್ಯಾಣ ಗಣಪತಿ ಭಟ್ ಅವರು ಇಹಲೋಕ ತ್ಯಜಿಸಿದ್ದು, ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
— Aravind Limbavali (@ArvindLBJP) October 12, 2021
(1/2) pic.twitter.com/6mTbFFeRCY
bhagavatha Padyana Ganapathi Bhat passed away on October 12. He was 66, and is survived by his wife and two sons. Mr. Bhat resided at Kalmadkka, Sullia taluk in Dakshina Kannada
Discussion about this post