ವಿಜಯಪುರ : ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರಲ್ಲಿ ಓರ್ವ ಪುರುಷ, ಓರ್ವ ಮಹಿಳೆ ಹಾಗೂ ಒಂದು ಮಗು ಸ್ಥಳದಲ್ಲಿಯೇ ಉಸಿರು ಚೆಲ್ಲಿದೆ.
ಇದೇ ಘಟನೆಯಲ್ಲಿ ಲಾರಿ ರಿಪೇರಿ ಮಾಡುತ್ತಿದ್ದ ಚಾಲಕ ಕೂಡಾ ಅಪಘಾತ ರಭಸಕ್ಕೆ ಮೃತಪಟ್ಟಿದ್ದಾನೆ.
ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಬೇಟಿ ನೀಡಿದ. ಮೃತರ ಹೆಸರು ಇನ್ನೂ ತಿಳಿದು ಬಂದಿಲ್ಲ. ಸ್ಥಳ ವಿಜಯಪುರ ಗ್ರಾಮೀಣ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
Discussion about this post